BREAKING NEWS(click on the news)----------
  • ಡಿಸೆಂಬರ್ 2ನೇ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ತಾಲೂಕುಗಳಿಗೆ ಭೇಟಿ ಹಿನ್ನಲೆ : ಇಲಾಖಾವಾರು ಮಾಹಿತಿ ಸಲ್ಲಿಸಲು ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಳ್ಳಿ ಸೂಚನೆ


    Date : 2017-12-01 SHARE

    ಧಾರವಾಡ : ಡಿಸೆಂಬರ್ 2ನೇ ವಾರದಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ವಿತರಿಸಲು ಇಲಾಖೆಗಳ ಅಭಿವೃದ್ಧಿಯ ಮಾಹಿತಿಯನ್ನು ಹೊಂದಿರುವ ಕಿರು ಪುಸ್ತಕವನ್ನು ಪ್ರಕಟಿಸಲಾಗುತ್ತಿದೆ. ಇದಕ್ಕೆ ಅಗತ್ಯವಿರುವ ಮಾಹಿತಿಯನ್ನು ಡಿಸೆಂಬರ್ 4 ರೂಳಗೆ ಸಲ್ಲಿಸುವಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಳ್ಳಿ ಸೂಚಿಸಿದರು. ಅವರು ಗುರುವಾರ ಮಧ್ಯಾಹ್ನ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿ ತಾಲೂಕಿನಿಂದ ತಮ್ಮ ಅಧೀನ ಅಧಿಕಾರಿಗಳಿಂದ 2013ರಿಂದ ನವ್ಹೆಂಬರ್ 2017ರ ವರೆಗೆ ತಮ್ಮ ಇಲಾಖೆಯಿಂದ ಸಾಧಿಸಿರುವ ಪ್ರಗತಿಯ ಮಾಹಿತಿಯನ್ನು ಸಲ್ಲಿಸಬೇಕು. ಪ್ರತಿ ತಾಲೂಕಾ ಮಟ್ಟದಿಂದ ಬರುವ ಮಾಹಿತಿಯನ್ನು ಆಯಾ ಅಧಿಕಾರಿ ದೃಢೀಕರಿಸಿರಬೇಕು. ಕ್ರೊಢೀಕೃತ ಮಾಹಿತಿಯನ್ನು ಜಿಲ್ಲಾಮಟ್ಟಕ್ಕೆ ಸಂಗ್ರಹಿಸಿ ಜಿಲ್ಲಾಮಟ್ಟದ ಅಧಿಕಾರಿಯು ತಮ್ಮ ದೃಡೀಕರಣದೊಂದಿಗೆ ಸಲ್ಲಿಸಬೇಕು ಎಂದು ಆದೇಶಿಸಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ಸ್ನೇಹಲ್ , ಅಪರಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಎಸ್.ಜಿ.ಕೊರವರ, ಧಾರವಾಡ ಉಪವಿಭಾಗಾಧಿಕಾರಿ ಮಹೇಶ ಕರ್ಜಿಗಿ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮಂಜುನಾಥ ಡೊಳ್ಳಿನ ಉಪಸ್ಥಿತರಿದ್ದರು.