ವಿವಾದಾತ್ಮಕ ಹೇಳಿಕೆ ನೀಡಿದ್ದ ಮೌಲ್ವಿ ಕಾಂಗ್ರೆಸ್ ಪರ ಪ್ರಚಾರ
Date : 2018-05-08 SHARE
ಹುಬ್ಬಳ್ಳಿ : ಹುಬ್ಬಳ್ಳಿ ಪಾಕಿಸ್ತಾನದಂತೆ ಕಾಣುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮೌಲ್ವಿ ಕಾಂಗ್ರೆಸ್ ಪರ ಪ್ರಚಾರ ನಡೆಸುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಮನೆಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡುತ್ತಿರುವ ಮೌಲ್ವಿ ಅಬ್ದುಲ್ ಹಮೀದ್ ಖೈರಾತಿ ಅವರು ಈ ಹಿಂದೆ ಹುಬ್ಬಳ್ಳಿಯ ಗಣೇಶಪೇಟೆಯನ್ನು ಈದ್ ಮಿಲಾದ್ ಆಚರಣೆ ಸಂದರ್ಭದಲ್ಲಿ ಪಾಕಿಸ್ತಾನ ದಂತೆ ಕಂಗೋಳಿಸುತ್ತಿದೆ ಎಂದು ದೇಶದ್ರೋಹಿ ಹೇಳಿಕೆ ನೀಡಿದ್ದರು. ಎಸಿಪಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಹೇಳಿಕೆ ನೀಡಿ ಜೈಲುಸೇರಿದ್ದ ಅಬ್ದುಲ್ ಹಮೀದ್ ಖೈರಾತಿ ಇದೀಗ ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ಅಬ್ಬಯ್ಯ ಪರ ಮತ ಯಾಚನೆ ಮಾಡಿರುವುದು ಚರ್ಚೆಗೆ ಕಾರಣವಾಗಿದೆ. ಮೌಲ್ವಿಯ ಕಾಂಗ್ರೆಸ್ ಪ್ರಚಾರಕ್ಕೆ ಬಿಜೆಪಿ ಹಾಗೂ ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿದೆ.