ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಂಡ ಚುನಾವಣಾ ಆಯೋಗ
Date : 2018-05-13 SHARE
ಬೆಂಗಳೂರು : ರಾಜ್ಯಾದ್ಯಂತ ಮೇ 12ರಂದು ನಡೆದ ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆಗಳನ್ನು ರಾಜ್ಯ ಚುನಾವಣಾ ಆಯೋಗ ಮಾಡಿಕೊಂಡಿದೆ. ಈಗಾಗಲೇ ಎಲ್ಲ ಜಿಲ್ಲೆಗಳಜಿಲ್ಲಾಡಳಿತಗಳಿಗೆ ಈ ನಿಟ್ಟಿನಲ್ಲಿ ಅಗತ್ಯ ಸೂಚನೆ ನೀಡಿರುವ ಆಯೋಗವು ಮತ ಎಣಿಕೆ ಕಾರ್ಯವು ಮೇ.೧೫ ರಂದು ಬೆಳಿಗ್ಗೆ ೮ ಗಂಟೆಗೆ ಆರಂಭವಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದೆ. ಮೊದಲಿಗೆ ಅಂಚೆ ಮತಪತ್ರಗಳ ಎಣಿಕೆ ಕಾರ್ಯ ನಡೆಯುತ್ತದೆ. ನಂತರ ಮತಯಂತ್ರಗಳಲ್ಲಿ ದಾಖಲಾಗಿರುವ ಮತಗಳ ಎಣಿಕೆ ನಡೆಯುವದು. ಪ್ರತಿ ಸುತ್ತಿನಲ್ಲಿ ೧೪ ಮತಗಟ್ಟೆಗಳ ಎಣಿಕೆ ಕಾರ್ಯ ಕೈಗೊಳ್ಳಲು ೧೪ ಟೇಬಲ್‌ಗಳನ್ನು ವ್ಯವಸ್ಥೆ ಪ್ರತಿ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆ ಕಾರ್ಯವು ೧೫ ರಿಂದ ೨೦ ಸುತ್ತುಗಳಲ್ಲಿ ನಡೆಯುತ್ತದೆ. ಮತಗಳ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಮೈಕ್ರೊ ಆರ್ಬ್ಸ್ವರ್‌ಗಳು ,ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಮತ ಎಣಿಕೆ ದಿನದಂದು ಬೆಳಿಗ್ಗೆ ೫.೩೦ ಕ್ಕೆ ಎಣಿಕೆ ಕೇಂದ್ರದಲ್ಲಿ ಹಾಜರಿರಲು ಈಗಾಗಲೇ ಸೂಚಿಸಲಾಗಿದೆ.