ದೇವಿಯ ಮೊರೆ ಹೋದ ಸಚಿವ ವಿನಯ ಕುಲಕರ್ಣಿ, ಶಾಸಕ ಕೋನರಡ್ಡಿ
Date : 2018-05-15 SHARE
ಧಾರವಾಡ : ಮತ ಎಣಿಕೆಗೆ ಕ್ಷಣ ಗಣನೆ ಆರಂಭವಾಗಿರುವ ಬೆನ್ನ ಹಿಂದೆಯೇ ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಗೂ ಧಾರವಾಡ ಜಿಲ್ಲೆಯ ಉಸ್ತುವಾರಿ ಮಂತ್ರಿ ವಿನಯ ಕುಲಕರ್ಣಿ, ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಅವರು ದೇವಿಯ ಮೊರೆ ಹೋಗಿದ್ದಾರೆ. ಇಲ್ಲಿಯ ಶಾಂತಿ ನಿಕೇತನ ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಕರಿಯಮ್ಮ ದೇವಿಯ ದೇವಸ್ಥಾನದಲ್ಲಿ ಇಬ್ಬರು ಸಂಕಲ್ಪ ಪೂಜೆ ಸಲ್ಲಿಸಿ, ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಶಾಲು ಹಾಕಿ ಸನ್ಮಾನ ಮಾಡಿ ಗೌರವಿಸಲಾಯಿತು. ಮಹಾವೀರ ಉಪಾಧ್ಯೆ, ಕೆ.ಎನ್. ಕುರಕುರಿ, ವಿಶ್ವನಾಥ ಯಲಿಗಾರ, ಸಿಜೆ. ಸಾಣಿಕೊಪ್ಪ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.