ಬಿಜೆಪಿ ಕಾರ್ಯಕರ್ತರಿಗೆ ತಲವಾರಿನಿಂದ ದಾಳಿ
Date : 2018-05-15 SHARE
ಮಂಗಳೂರು : ಬಿಜೆಪಿ ವಿಜಯೋತ್ಸವ ವೇಳೆ ಕಲ್ಲುತೂರಾಟ ನಡೆದ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಪದವು ಪ್ರಾರ್ಥನಾ ಮಂದಿರದ ಬಳಿ ನಡೆದಿದೆ. ಭಿನ್ನಕೋಮಿನ ಯುವಕರಿಂದ ಬಿಜೆಪಿ ಕಾರ್ಯಕರ್ತರಿಗೆ ತಲವಾರಿನಿಂದ ದಾಳಿ ಮಾಡಲಾಗಿದ್ದು, ಇದರಿಂದ ನಾಲ್ವರು ಬಿಜೆಪಿ ಕಾರ್ಯಕರ್ತರಿಗೆ ಗಂಭೀರ ಗಾಯಗಳಾಗಿವೆ. ಸುಮಾರು 50ಕ್ಕೂ ಅಧಿಕ ಯುವಕರಿಂದ ದಾಳಿ ನಡೆದಿದ್ದು, ಘಟನೆಯಲ್ಲಿ ಹಿಂದೂ ಧಾರ್ಮಿಕ ಕೇಂದ್ರಕ್ಕೂ ಕಲ್ಲು ತೂರಾಟ ಮಾಡಲಾಗಿದೆ. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.