ಬಿಜೆಪಿ ವಿಜಯೋತ್ಸವಕ್ಕೆ ಅಡ್ಡಿ ಪಡಿಸಿದ ನಾಲ್ವರ ಬಂಧನ
Date : 2018-05-16 SHARE
ಧಾರವಾಡ : ಬಿಜೆಪಿ ವಿಜಯೋತ್ಸವಕ್ಕೆ ಅಡ್ಡಿ ಪಡಿಸಿದ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ ಘಟನೆ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ. ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರ-೭೧ರ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಬಿಜೆಪಿ ಶಾಸಕ ಅಮೃತ ದೇಸಾಯಿ ಅವರ ತವರೂರಾದ ಹಂಗರಕಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಬಿಜೆಪಿ ಮುಖಂಡ ಶಿವನಗೌಡ ನಾಗನಗೌಡ ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಗರಗ ಪೊಲೀಸರು ಈ ಸಂಬಂಧ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರಾದ ಕಲ್ಲಪ್ಪ, ಸುರೇಶ, ಶಂಕ್ರಯ್ಯ ಹಾಗೂ ಮಹದೇವ ಅವರನ್ನು ಬಂಧಿಸಲಾಗಿದೆ ಎಂದು ಗರಗ ಪೊಲೀಸ್ ಠಾಣೆ ಪಿಎಸ್ಐ ಅವರು ಪ್ರಜಾಕಿರಣಕ್ಕೆ ತಿಳಿಸಿದ್ದಾರೆ.