ಹತ್ತಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
Date : 2018-05-17 SHARE
ಬೆಂಗಳೂರು: ರಾಜ್ಯಪಾಲ ವಜುಬಾಯಿ ವಾಲಾ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಿಧಾನಸೌಧದ ಪಶ್ಚಿಮ ಗೇಟನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ೧೦ ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರಿಗೆ ಸ್ಥಳದಿಂದ ತೆರಳಲು ಪೊಲೀಸರು ಹಲವು ಬಾರಿ ಸೂಚಿಸಿದರೂ ಅದಕ್ಕೆ ನಿರಾಕರಿಸಿ ಪ್ರತಿಭಟನೆ ತೀವ್ರಗೊಳಿಸಿದ ಪರಿಣಾಮ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಿಎಂಟಿಸಿ ಬಸ್ಸಿನಲ್ಲಿ ಕಾರ್ಯಕರ್ತರನ್ನು ಕರೆದೊಯ್ದರು.