ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭೇಟಿ ಮಾಡಿದ ಹೆಚ್.ಡಿ. ಕೆ
Date : 2018-05-21 SHARE
ನವದೆಹಲಿ : ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿ ಯಲ್ಲಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದರು. ಬುಧವಾರ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಅಧಿಕೃತ ಆಹ್ವಾನ ನೀಡಿದ ಅವರು ಬೇಷರತ್ತಾಗಿ ಬೆಂಬಲ ನೀಡಿ ಸರಕಾರ ರಚಿಸಲು ಸಹಕಾರ ನೀಡಿದ್ದಕ್ಕೆ ತುಂಬು ಹೃದಯದ ಅಭಿನಂದನೆ ಸಲ್ಲಿಸಿದರು. ಬಳಿಕ ಕೆಲ ಕಾಲ ಚರ್ಚೆ ನಡೆಸಿದ ಉಭಯ ನಾಯಕರು ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ನಡೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಮಾಲೋಚನೆ ನಡೆಸಿದರು. ಅವರಿಗೆ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ ಸೇರಿದಂತೆ ಅನೇಕ ನಾಯಕರು ಸಾಥ್ ನೀಡಿದರು. ಇದೇವೇಳೆ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಅವರನ್ನು ಕೂಡ ಕುಮಾರಸ್ವಾಮಿ ಭೇಟಿ ಮಾಡಿ ಸಹಕಾರ ನೀಡಿದಕ್ಕೆ ಅಭಿನಂದನೆ ಸಲ್ಲಿಸಿ, ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನಿಸಿದರು.