FOR BEST NEWS & ADVERTISEMENT CONTACT PRAJAKIRAN - 9341197609
  • ಮೂರನೇ ದಿನಕ್ಕೆ ರಾಜೀನಾಮೆ ಸಲ್ಲಿಸಿದ ನೂತನ ಸಿಎಂ ಯಡಿಯೂರಪ್ಪ


    Date : 2018-05-19 SHARE

    ಬೆಂಗಳೂರು : ರಾಜ್ಯ ವಿಧಾನ ಸಭೆಯ ಕಲಾಪದಲ್ಲಿ ವಿಶ್ವಾಸ ಮತ ಯಾಚನೆ ಮಾಡದೆ ಭಾಷಣ ಮುಗಿಸಿ ನೇರವಾಗಿ ರಾಜ್ಯಪಾಲರ ಕಚೇರಿಗೆ ಆಗಮಿಸಿದ ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಮೂರು ದಿನಗಳ ಆಡಳಿತಕ್ಕೆ ಯಡಿಯೂರಪ್ಪ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿ ಸರಕಾರಕ್ಕೆ ತೆರೆಬಿದ್ದಂತಾಗಿದೆ. ಅವರಿಗೆ ಕೇಂದ್ರ ಸಚಿವ ಅನಂತಕುಮಾರ, ಶೋಭಾ ಕರಂದ್ಲಾಜೆ ಸಾಥ್ ನೀಡಿದರು.