ಕೆಪಿಸಿಸಿ ಪರಿಶಿಷ್ಟ ಪಂಗಡದ ರಾಜ್ಯ ಹಿರಿಯ ಉಪಾಧ್ಯಕ್ಷರಾಗಿ ಚಂದ್ರಶೇಖರ ಜುಟ್ಟಲ ನೇಮಕ
Date : 2017-11-04 SHARE
ಧಾರವಾಡ : ಕೆಪಿಸಿಸಿ ಪರಿಶಿಷ್ಟ ಪಂಗಡದ ರಾಜ್ಯ ಹಿರಿಯ ಉಪಾಧ್ಯಕ್ಷರನ್ನಾಗಿ ಕಾಂಗ್ರೆಸ್ನ ಯುವ ಮುಖಂಡ ಚಂದ್ರಶೇಖರ ಜುಟ್ಟಲ ಅವರನ್ನು ಕೆಪಿಸಿಸಿ ಅಧ್ಯಕ್ಷರಾದ ಡಾ. ಜಿ. ಪರಮೇಶ್ವರ ಅವರ ಆದೇಶದ ಮೇರೆಗೆ ನೇಮಿಸಿ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯಾಧ್ಯಕ್ಷ ಕೆ.ಪಿ. ಪಾಲಯ್ಯ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಚಂದ್ರಶೇಖರ ಜುಟ್ಟಲ ಅವರು ಕುಂದಗೋಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ದಿ. ಗೋವಿಂದಪ್ಪ ಜುಟ್ಟಲ ಅವರ ಮಗನಾಗಿದ್ದು, ಕಳೆದ ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿ ದುಡಿದು, ಧಾರವಾಡ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ 5 ವರ್ಷ, ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಖಜಾಂಚಿಯಾಗಿ 5 ವರ್ಷ ಹಾಗೂ ಕೆಪಿಸಿಸಿ ಪರಿಶಿಷ್ಟ ಪಂಗಡದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ 5 ವರ್ಷ ಪಕ್ಷವನ್ನು ಮುನ್ನಡೆಸಿದ ಅವರ ಸೇವೆಯನ್ನು ಗುರುತಿಸಿ ಕೆಪಸಿಸಿ ಪರಿಶಿಷ್ಟ ಪಂಗಡದ ರಾಜ್ಯ ಹಿರಿಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅವರು ಪಕ್ಷವನ್ನು ಬರುವ ದಿನಗಳಲ್ಲಿ ಇನ್ನಷ್ಟು ಸಂಘಟಿಸಿ ಮತ್ತೋಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರುವಂತೆ ಶ್ರಮಿಸಬೇಕು ಎಂದು ಕೆಪಿಸಿಸಿ ಪರಿಶಿಷ್ಟ ಪಂಗಡದ ರಾಜ್ಯಾಧ್ಯಕ್ಷ ಕೆ.ಪಿ. ಪಾಲಯ್ಯ ತಿಳಿಸಿದ್ದಾರೆ.