ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ಮಾಡಿದ ಬಸವಾನಂದ ಸ್ವಾಮೀಜಿ
Date : 2017-11-08 SHARE
ಧಾರವಾಡ : ಮನಗುಂಡಿಯ ಶ್ರೀ ಗುರು ಬಸವ ಮಹಾಮನೆಯ ಬಸವಾನಂದ ಸ್ವಾಮೀಜಿಯವರು ನಿನ್ನೆ ಹಾಸನದ ಪರಿವರ್ತನಾ ರ್ಯಾಲಿಯ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹಲವು ನಿಮಿಷಗಳ ಕಾಲ ಚರ್ಚೆ ನಡೆಸಿದರು. ಪರಿವರ್ತನೆ ರ್ಯಾಲಿ ಯಶಸ್ವಿಯಾಗಲಿ ಎಂದು ಶುಭ ಕೋರಿ, ಯಡಿಯೂರಪ್ಪ ಅವರನ್ನು ಸನ್ಮಾನಿಸಿ ಗೌರವಿಸಿದರು. ಬಸವಾನಂದ ಶ್ರೀಗಳು ಕಲಘಟಗಿ ವಿಧಾನ ಸಭಾ ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳಾಗಿದ್ದು, ಈಗಾಗಲೇ ಸ್ವಾಮೀಜಿಗಳು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರನ್ನು ಎರಡು ಬಾರಿ ಭೇಟಿ ಮಾಡಿದ್ದರು. ಅಲ್ಲದೆ, ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರಿಗೆ ಬಿಜೆಪಿಯಿಂದ ಸ್ಪರ್ಧೆ ಬಯಸಿ, ತೀವ್ರ ಕುತೂಹಲ ಕೆರಳಿಸಿದ್ದರು. ಇದೀಗ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಠಿಸಿದೆ.