BREAKING NEWS(click on the news)----------
  • ಮೇಣದ ಬತ್ತಿ ಹಿಡಿದು ಕಾಂಗ್ರೆಸ್‍ನಿಂದ ಕರಾಳ ದಿನಾಚರಣೆ


    Date : 2017-11-09 SHARE

    ಧಾರವಾಡ : ಪ್ರಧಾನಿ ನರೇಂದ್ರ ಮೋದಿ ಅವರು ಏಕಾಎಕಿ ನೋಟ್‍ಬಂಧಿ ಮಾಡುವ ಮೂಲಕ ಜನ ಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅವರು ನಗರದ ಗಾಂಧಿಚೌಕದಲ್ಲಿ ಕೆಪಿಸಿಸಿ ಸದಸ್ಯ ದೀಪಕ ಚಿಂಚೋರೆ ಅವರ ನೇತೃತ್ವದಲ್ಲಿ ಹಮ್ಮಿಕೊಂಡ ಕರಾಳ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ನೋಟ್ ಬ್ಯಾನ್‍ನಿಂದ ದೇಶದ ಆರ್ಥಿಕ ಪರಿಸ್ಥಿತಿ ಹತ್ತು ವರ್ಷಗಳಲ್ಲಿಯೇ ಅತಿ ಹೆಚ್ಚು ಪ್ರಮಾಣದಲ್ಲಿ ಕುಸಿದಿದ್ದು, ಕಪ್ಪು ಹಣ ವಾಪಾಸ್ಸು ತರುವ ಕುರಿತು ಈವರೆಗೆ ಯಾವುದೇ ಮೌನ ಮುರಿದಿಲ್ಲ ಎಂದು ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ದೀಪಕ ಚಿಂಚೋರೆ, ಪ್ರಧಾನಿ ನರೇಂದ್ರ ಮೋದಿಯವರ ಬಣ್ಣದ ಮಾತುಗಳಿಗೆ ಜನ ಮರಳಾಗುವ ಕಾಲ ಇದೀಗ ಹೋಗಿದೆ. ಅವರ ನೋಟ್ ಬಂಧಿ ಇದೀಗ ಒಂದು ವರ್ಷ ಪೂರೈಸಿದೆ. ಅವರು ಹೇಳಿದ್ದ ಯಾವುದೇ ಭರವಸೆಗಳು ಈವರೆಗೆ ಈಡೇರಿಲ್ಲ. ಇದಕ್ಕೆ ಬರುವ ದಿನಗಳಲ್ಲಿ ಜನತೆಯೇ ತಕ್ಕ ಉತ್ತರ ನೀಡುವ ಮೂಲಕ ಅವರನ್ನು ಮನೆಗೆ ಕಳುಹಿಸಲಿದ್ದಾರೆ ಎಂದರು. ಬಳಿಕ ಮೇಣದ ಬತ್ತಿ ಹಿಡಿದು ಒಂದು ನಿಮಿಷಗಳ ಕಾಲ ಮೌನ ಆಚರಿಸಿ, ಕೇಂದ್ರದ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಲಿಗೊರವನಕೊಳ್ಳ, ಇಸ್ಮಾಯಿಲ್ ತಮಟಗಾರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.