ರಾಜ್ಯ

ದೇಶ ಕಾಯುವ ಸೈನಿಕರ ಕುರಿತು ಅವಹೇಳನಕಾರಿ ಸಲ್ಲದು

ಹುಬ್ಬಳ್ಳಿ : ಭಾರತದ ಐಕ್ಯತೆ ಹಾಗೂ ಸಾರ್ವಭೌಮತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಗಡಿಯಲ್ಲಿ ನಿಂತು ದೇಶವನ್ನು ಕಾಯುವ ಸೈನಿಕರ ಕುರಿತು ಅವಹೇಳನಕಾರಿ ಮಾತುಗಳನ್ನು ಯಾರು ಆಡಬರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶಟ್ಟರ್ ಹೇಳಿದರು.

ಅವರು ಹುಬ್ಬಳ್ಳಿ ನೆಹರು ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ಜರುಗುತ್ತಿವೆ. ನಗರದಲ್ಲಿ ಕಾನೂನು ಸವ್ಯವಸ್ಥೆಯನ್ನ ಕಾಪಾಡಲು ಪೋಲಿಸಲು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಬಸವರಾಜ್ ಹೊರಟ್ಟಿಯವರು ಮಾತನಾಡಿ, ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ. ಜನಪ್ರತಿನಿಧಿಗಳು ಕಾನೂನುನಿಗೆ ಹೊರತಾದವರಲ್ಲ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.

ಎಲ್ಲರೂ ಸಂವಿಧಾನಕ್ಕೆ ಬದ್ದವಾಗಿದ್ದು, ಜನಪ್ರಿನಿಧಿಗಳು ಅದೇ ರೀತಿ ನಡೆದುಕೊಳ್ಳಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು. ಸೈನಿಕರ ಕುರಿತು ಅವಹೇಳನಕಾರಿ ಮಾತುಗಳನ್ನು ಆಡುವವರ ವಿರುದ್ದ ಕಾನೂನು ಕ್ರಮವನ್ನು ಕೈಗೊಳ್ಳಬೇಕು ಎಂದು ಅವರು ಅಭಿಪ್ರಾಯ ವ್ಯಕ್ತ ಪಡಿಸಿದರು.

ಈ ವೇಳೆ ಧಾರವಾಡ ಸಂಸದ ಪ್ರಲ್ಹಾದ ಜೋಶಿ, ಹುಬ್ಬಳ್ಳಿ ತಹಸೀಲ್ದಾರ್ ಶಶಿಧರ್ ಮಾಡ್ಯಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

Please follow and like us:

Leave a Reply

Your email address will not be published. Required fields are marked *