ರಾಜ್ಯ

ಒಂದು ದಿನದ ಮಗುವನ್ನು ದೇವಸ್ಥಾನದಲ್ಲಿ ಬಿಟ್ಟು ಹೋದ ಪಾಪಿ ತಾಯಿ

ಚಿಕ್ಕೋಡಿ prajakiran.com : ಒಂದು ದಿನದ ನವಜಾತ ಗಂಡು ಮಗುವನ್ನು ದೇವಸ್ಥಾನದಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಹಾಗೂ ಇಟನಾಳ ಗ್ರಾಮದ ಮಧ್ಯದ ದಾರಿಯಲ್ಲಿ ಇರುವ ದೇವಸ್ಥಾನದಲ್ಲಿ ನಡೆದಿದೆ.

ಪಟ್ಟಣದ ಹಾಗೂ ಗ್ರಾಮದ ಹೊರವಲಯದ ಬಸವೇಶ್ವರ ದೇವಸ್ಥಾನದಲ್ಲಿ ಹೆರಿಗೆಯ ನಂತರ ಗಂಡು ಮಗುವನ್ನು ಕೈಚೀಲದಲ್ಲಿ ಇಟ್ಟು ಪರಾರಿಯಾಗಿದ್ದಾರೆ.

ಇಂದು ಬೆಳಗಿನ ಜಾವ 5 ಗಂಟೆಗೆ ಮಗು ಅಳುವಿನ ಧ್ವನಿ ಕೇಳಿದ ದಿನ ನಿತ್ಯ ದೇವಸ್ಥಾನದವನ್ನು ಕಸ ಗುಡಿಸಲು ಹೊಗುವವರು ದಿನ ನಿತ್ಯದಂತೆ ದೇವಸ್ಥಾನ ಕ್ಕೆ ಹೋದ ಸಂದರ್ಭದಲ್ಲಿ ಮಗು ಅಳುವುದನ್ನು ಕೇಳಿ ಪಕ್ಕದ ಮನೆಯವರನ್ನು ಕರೆದು ಮಗುವನ್ನು ರಕ್ಷಿಸಿ, ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಆಗ ಸ್ಥಳಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರಾದ ಲಕ್ಷ್ಮಿ ಹುಲಗಾನಿ ,ಕಾಳವ್ವಾ ಕಂಬಾರ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಮಗುವಿಗೆ ಆರೈಕೆ ಮಾಡಿ ಸ್ಥಳೀಯ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಈಗ ಮಗು ಆರೋಗ್ಯವಾಗಿದೆ.

ಕರೊನ ವೈರಸ್ ಹಾವಳಿ ನಡುವೆಯೂ ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮುಗಳಖೋಡ ಪಟ್ಟಣದ ಹಾಗೂ ಇಟ್ನಾಳ ಗ್ರಾಮದ ವ್ಯಾಪ್ತಿಯಲ್ಲಿ ಯಾವುದೇ ಹೆರಿಗೆಯಾಗಿಲ್ಲ.

ಬೇರೆ ಯಾವುದೋ ಊರಿನಲ್ಲಿ ಹೆರಿಗೆಯಾಗಿದ್ದು, ನಂತರ ಆ ಮಗುವನ್ನು ದೇವಸ್ಥಾನದಲ್ಲಿ ಬಿಟ್ಟು ಹೋಗಿರುವ ಸಾಧ್ಯತೆಗಳಿವೆ.

ಈ ಕುರಿತು ಆರೋಗ್ಯ ಇಲಾಖೆಯ ಮೇಲಾಧಿಕಾರಿಗಳಿಗೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಆಶಾ ಕಾರ್ಯಕರ್ತೆಯರು ಹೇಳಿದ್ದಾರೆ.

ಈ ಕುರಿತು ಹಾರುಗೇರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಗು ಬಿಟ್ಟು ಹೋದವರನ್ನು ಹುಡುಕಲು ಪ್ರಯತ್ನಿಸುತ್ತಿದ್ದಾರೆ

Please follow and like us:

Leave a Reply

Your email address will not be published. Required fields are marked *