ರಾಜ್ಯ

ಮತ್ತೋಬ್ಬ ಶಂಕಿತನನ್ನು ವಶಕ್ಕೆ ಪಡೆದ ಪೊಲೀಸರು

ಮೈಸೂರು : ಕಿಚ್ಚಗುತ್ತಿ ಮಾರಮ್ಮ ದೇವಸ್ಥಾನದ ವಿಷಪ್ರಸಾದ ಸ್ವೀಕರಿಸಿ 14 ಜನ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳ್ಳೆಗಾಲ ಪೊಲೀಸರು ಮತ್ತೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈತನನ್ನು ದೇವಸ್ಥಾನದ ಕಾರ್ಯದರ್ಶಿ ಶಶಿ ಬಿಂಬಾ ಎಂದು ಗುರುತಿಸಲಾಗಿದೆ. ಈತ ಕೂಡ ದೇವಸ್ಥಾನದ ಟ್ರಸ್ಟಿ ಚಿನ್ನಪ್ಪ ಕಡೆ ಗುರುತಿಸಿಕೊಂಡಿದ್ದ ಎಂದು ತಿಳಿದುಬಂದಿದೆ. ಈತನ ವಿಚಾರಣೆ ಬಳಿಕ ಕಿಚ್ಚಗುತ್ತಿ ಮಾರಮ್ಮ ದೇವಸ್ಥಾನದ ವಿಷಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಗಳು ಹೊರ ಬರಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ ಕೊಟೆಪೋದು ಗ್ರಾಮಸ್ಥರು ಸುಳ್ವಾಡಿ ದೇವಸ್ಥಾನದ ಟ್ರಸ್ಟಿಗಳು ಹಾಗೂ ಸಾಲೂರು ಮಠದ ಇಮ್ಮಡಿ ಮಹದೇವ ಸ್ವಾಮೀಜಿ ಗ್ರಾಮಕ್ಕೆ ಆಗಮಿಸಬೇಕು ಎಂದು ಪಟ್ಟುಹಿಡಿದಿದ್ದಾರೆ.

ಮೈಯಿಬಾಯಿ ಶವವನ್ನು ಸ್ವೀಕರಿಸದೆ ಅವರ ಅನಾಥ ಮಕ್ಕಳ ಬದುಕು ರೂಪಿಸಲು ಸಂಬಂಧಪಟ್ಟವರು ಗಮನ ಹರಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಟ್ರಸ್ಟಿಗಳು ಯಾರು ವಿಷಪ್ರಸಾದ ಸ್ವೀಕರಿಸಿಲ್ಲ. ಕೇವಲ ಬಡಪಾಯಿ ಜೀವಗಳ ಜೊತೆಗೆ ಚೆಲ್ಲಾಟವಾಡಿದ್ದಾರೆ. ಹೀಗಾಗಿ ಆರೋಪಿಗಳು ಯಾರೇ ಇರಲಿ ಕಠಿಣ ಶಿಕ್ಷೆ ಒದಗಿಸಬೇಕು. ಆ ಮೂಲಕ ಅವರ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಈ ವಿಷಯವನ್ನು ಚಾಮರಾಜನಗರ ಸಂಸದ ಧೃವನಾರಾಯಣ ಅವರು ಶೂನ್ಯವೇಳೆಯಲ್ಲಿ ಲೋಕಸಭೆಯಲ್ಲಿ ಪ್ರಸ್ತಾಪಿಸಿದ್ದು, ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಸಾವನ್ನಪ್ಪಿದ 14 ಕುಟುಂಬಗಳಿಗೆ ಹಾಗೂ ಅಸ್ವಸ್ಥಗೊಂಡ ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *