ರಾಜ್ಯ

ಸಾರಿಗೆ ಸಂಸ್ಥೆ ನೌಕರರ ಬೇಡಿಕೆ ಈಡೇರಿಸದಿದ್ರೆ ಉಗ್ರ ಹೋರಾಟ

ಹುಬ್ಬಳ್ಳಿ: ಸಾರಿಗೆ ನೌಕರರ ಪಿಂಚಣಿ ಹಾಗೂ ವೇತನ ತಾರತಮ್ಯ ನಿವಾರಿಸಬೇಕು.ರಾಜ್ಯ ಸರ್ಕಾರದ ಹಿಡಿತದಲ್ಲಿರುವ ಸಾರಿಗೆ ಸಂಸ್ಥೆಯನ್ನು ಸರಕಾರಿ ಇಲಾಖೆ ಎಂದು ಪರಿಗಣಿಸಬೇಕು ಎಂದು ನಾಡೋಜ ಪಾಟೀಲ್ ಪುಟ್ಟಪ್ಪ ಒತ್ತಾಯಿಸಿದ್ದಾರೆ.

ಅವರು ಭಾನುವಾರ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕುರಿತು ರಾಜ್ಯ ಸರಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಕರ್ತವ್ಯದ ಮೇಲೆ ಸಾವನ್ನಪ್ಪಿದ್ದರೆ, ಅವರ ಕುಟುಂಬಕ್ಕೆ 30 ಲಕ್ಷ‌ ಪರಿಹಾರ ನೀಡಬೇಕು. 90 ದಿನಗಳಲ್ಲಿ ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಹಕ್ಕೋತ್ತಾಯ ಮಂಡಿಸಿದರು.

ರಾಜ್ಯ ಸರ್ಕಾರ ಸಾರಿಗೆ ನೌಕರರ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದೆ.ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳನ್ನು ಈಡೇರಿಸದಿದ್ರೆ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕೆ.ಎಸ್.ಆರ್.ಟಿ.ಸಿ. ನೌಕರರ ವಿಚಾರ ವೇದಿಕೆ ವತಿಯಿಂದ ನಾಡೋಜ ಪಾಟೀಲ್ ಪುಟ್ಟಪ್ಪನವರ ನೇತೃತ್ವದಲ್ಲಿ ಕಪ್ಪು ಬಟ್ಟೆ ಕಟ್ಟಿಕೊಂಡು ಹೋರಾಟ ಮಾಡಲು ನೌಕರರು ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದರು.

ಈ ಪತ್ರಿಕಾ ಗೋಷ್ಠಿಯಲ್ಲಿ ವಾಯ್. ಎಂ. ಶಿವರಡ್ಡಿ, ರಫೀಕ್ ಅಹ್ಮದ ನಾಗನೂರ, ತಿಪ್ಪೇಶ್ವರ ಅಣಜಿ, ರಮೇಶ ಮೋರೆ ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *