ಹುಬ್ಬಳ್ಳಿ:- ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮ ಪಂಚಾಯತಿ ಅಧ್ಯಕ್ಷನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.
ಬಸವರಾಜ್ ಕಡಪಟ್ಟಿ (೨೮) ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ
ಅಗಡಿ ಕ್ರಾಸ್ ಬಳಿ ಭೀಕರವಾಗಿ ಕೊಲೆ ಮಾಡಲಾಗಿದೆ.
ಬಸವರಾಜ ಸಂಚರಿಸುತ್ತಿದ್ದ ಕಾರ್ ಗೆ ಡಿಕ್ಕಿ ಹೊಡೆದು ಗಲಾಟೆ ತೆಗೆಯಲಾಗಿದೆ. ಆನಂತರ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಬಸವರಾಜ್ ಕಡಪಟ್ಟಿ ಇತ್ತೀಚೆಗೆ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗಿದ್ದ. ಈ ಮೊದಲು ಜೆಡಿಎಸ್ ನಲ್ಲಿದ್ದ ಬಸವರಾಜ್ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ.
ಕೋಳಿ ಫಾರಂ ಕೂಡ ನಡೆಸುತ್ತಿದ್ದ ಬಸವರಾಜ್ ಕಡಪಟ್ಟಿ ಕೊಲೆಗೆ
ಹಳೆ ರಾಜಕೀಯ ವೈಷಮ್ಯವೇ ಕಾರಣ ಎಂದು ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.