ಅಂತಾರಾಷ್ಟ್ರೀಯ

ಅಮೇಠಿಯಲ್ಲಿ ಹಿನ್ನಡೆ ವಯನಾಡು ನಲ್ಲಿ ರಾಹುಲ್ ಗಾಂಧಿ ಮುನ್ನಡೆ

ನವದೆಹಲಿ : ಪ್ರಧಾನಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರು ತಮ್ಮ ತವರು ಕ್ಷೇತ್ರ ಅಮೇಠಿಯಲ್ಲಿ ಹಿನ್ನಡೆ ಸಾಧಿಸಿದ್ದಾರೆ.

2500 ಮತಗಳ ಹಿನ್ನಡೆ ಸಾಧಿಸಿರುವ ರಾಹುಲ್ ಗಾಂಧಿ ಅವರು ಇಲ್ಲಿ ಸ್ಮೃತಿ ಇರಾನಿ ವಿರುದ್ದ ಸ್ಪರ್ಧಿಸಿದ್ದರು. ಅವರು ಮುನ್ನಡೆ ಸಾಧಿಸಿದ್ದಾರೆ.

ಇನ್ನೂ ವಯನಾಡಿನಲ್ಲಿ ರಾಹುಲ್ ಗಾಂಧಿ ಅವರು ಒಂದು ಲಕ್ಷಗಳ ಮುನ್ನಡೆ ಸಾಧಿಸಿದ್ದಾರೆ. ವಯನಾಡಿನಲ್ಲಿ ಗೆಲುವಿನತ್ತ ಮುಖ ಮಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ 1 ಲಕ್ಷ 20 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಗುಜರಾತ್ ನ ಗಾಂಧಿನಗರದಿಂದ ಸ್ಪರ್ಧೆ ಮಾಡಿದ್ದು, ಅವರು 1 ಲಕ್ಷ 90 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ 54 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ, ಬಿಜೆಪಿ 278 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಯುಪಿಎ ತೀವ್ರ ಹಿನ್ನಡೆ ಅನುಭವಿಸುತ್ತಿದ್ದು,ಎನ್ ಡಿ ಎ 340ರ ಗಡಿ ದಾಟಿದ್ದು, ಹಾಗೂ ಇತರರು 100 ರ ಗಡಿ ದಾಟುವ ಸನಿಹದಲ್ಲಿದ್ದಾರೆ.

Please follow and like us:

Leave a Reply

Your email address will not be published. Required fields are marked *