ರಾಜ್ಯ

ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ, ಮೂರು ದಿನ ಶೋಕಾಚರಣೆ

ಬೆಂಗಳೂರು : ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಹಿರಿಯ ಸಾಹಿತಿ, ನಟ ನಿರ್ದೇಶಕ ಕಲೆ, ರಂಗಭೂಮಿಗೆ ಅಪಾರ ಕೊಡುಗೆ ನೀಡಿದ ಗಿರೀಶ್ ಕಾರ್ನಾಡ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಶಾಲಾ, ಕಾಲೇಜುಗಳಿಗೆ ಹಾಗೂ ಒಂದು ದಿನದ ಸರಕಾರಿ ರಜೆ ಆಚರಿಸಲು ನಿರ್ಧರಿಸಿದೆ.

ಹೀಗಾಗಿ ಸೋಮವಾರ ರಜೆ ಘೋಷಿಸಿದ್ದು, ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಆಚರಿಸಲು ನಿರ್ಧರಿಸಿದೆ. ಹೀಗಾಗಿ ಮುಂದಿನ ಮೂರು ದಿನಗಳ ಕಾಲ ಯಾವುದೇ ಮನೋರಂಜನೆ ಕಾರ್ಯಕ್ರಮ ಆಚರಿಸದಂತೆ ಸೂಚಿಸಿದೆ.

ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ವಿದೇಶಾಂಗ ಖಾತೆ ಮಾಜಿ ಸಚಿವೆ ಸುಷ್ಮಾ ಸ್ವರಾಜ್, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಹೆಚ್. ಕೋನರಡ್ಡಿ, ಕರ್ನಾಟಕ ಕಾಂಗ್ರೆಸ್ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದು,

ನಟ,ಸಾಹಿತಿ,ಚಿಂತಕ, ಪ್ರಗತಿಪರ ಹೋರಾಟಗಾರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ಅಗಲಿಕೆ ಸಾಹಿತ್ಯ ಲೋಕಕ್ಕೆ,ಹಾಗೂ ವಿಶೇಷವಾಗಿ ಕರ್ನಾಟಕಕ್ಕೆ ತುಂಬಲಾರದ ನಷ್ಟ ಮೃತರ ಆತ್ಮಕ್ಕೆ ಶಾಂತಿ ದೊರಕಲಿ ಅವರ ಕುಟುಂಬದವರಿಗೆ ಬಂಧು ಮಿತ್ರರಿಗೆ ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿ ದೇವರು ನೀಡಲೆಂದು ಪ್ರಾರ್ಥಿಸುತ್ತೇವೆ ಎಂದು ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *