ಧಾರವಾಡ : ಭಾರತ ಬಂದ್ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಸೋಮವಾರ ಸೆ.10 ರಂದು ರಜೆ ಘೋಷಿಸಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಈ ಕುರಿತು ಆದೇಶ ಹೊರಡಿಸಿರುವ ಅವರು, ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಧಾರವಾಡ ಜಿಲ್ಲೆಯ ಎಲ್ಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದೆ.
ಆದರೆ ಶಾಲಾ ರಜಾ ಅವಧಿಗಳನ್ನು ಸರಿದೂಗಿಸಲು ಮುಂಬರುವ ಶನಿವಾರ ಪೂರ್ಣದಿನ ತರಗತಿಗಳನ್ನು ನಡೆಸಲು ಸೂಚಿಸಿದ್ದಾರೆ.
ಹುಬ್ಬಳ್ಳಿ : ಹುಬ್ಬಳ್ಳಿಯ ಮಡಿವಾಳ ನಗರದ ಮಲ್ಲಿಕಾರ್ಜುನ ಚರಂತಿಮಠ ಅವರ ಮನೆಯಲ್ಲಿ ಮಾರಾಟ ಮಾಡಲಾಗುತ್ತಿದ್ದ 21 ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಸಾಯನಿಕ ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಿಒಪಿ ಗಣೇಶ ವಿಗ್ರಹಗಳ ಮಾರಾಟದ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ತಂಡವು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿ ವಿಗ್ರಹಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. Share on: […]
ಹುಬ್ಬಳ್ಳಿ : ಸ್ಮಾರ್ಟ್ ಸಿಟಿ ಯೋಜನೆಯಡಿ 216 ಕೋಟಿ ಹಣ ಲಭ್ಯವಿದ್ದು , ಯೋಜನೆಯನ್ನು ವೇಗವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ, ಜೀವನೋಪಾಯ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ. ದೇಶಪಾಂಡೆ ಹೇಳಿದರು. ಅವರು ಸೋಮವಾರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಯ ಸಭಾಂಗಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಕುರಿತು ಪರಿಶೀಲನಾ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಇದುವರೆಗೂ ಸ್ಮಾಟ್ ಸಿಟಿ ಯೋಜನೆಯಡಿ 12 ಕಾಮಗಾರಿಗಳ ಯೋಜನಾ ವರದಿಗಳು ತಯಾರಾಗಿ […]
ಧಾರವಾಡ : ಇಲ್ಲಿಯ ಹಳ್ಳಿಗೇರಿಯ ನೇಚರ್ ಫಸ್ಟ್ ಇಕೋ ವಿಲೇಜಿನಲ್ಲಿ ವಿಶ್ವ ಕೈದೋಟ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೇವಲ ಅರ್ಧ ಗುಂಟೆ ಜಾಗದಲ್ಲಿ 64 ತರಹದ ವಿವಿಧ ಬೆಳೆಗಳನ್ನು ಹೇಗೆ ಬೆಳೆಯಬಹುದೆಂಬ ಮಾದರಿಯನ್ನು ಪ್ರಧಾನ ಸೇವಕ ಪ್ರಕಾಶ ಗೌಡರ ವಿದ್ಯಾರ್ಥಿಗಳಿಗೆ ವಿವರಿಸಿದರು. ಇದಲ್ಲದೆ, ಕೈದೋಟದಲ್ಲಿ ಹಸಿರು ತಪ್ಪಲ, ಕಾಯಿಪಲ್ಲೆ, ತರಕಾರಿ ಬಳ್ಳಿ, ಹೂ ಗಿಡಗಳು, ಔಷಧಿ ಸಸ್ಯಗಳು, ಹಣ್ಣಿನ ಗಿಡಗಳು ಹಾಗೂ ಅಡುಗೆ ಮನೆಗೆ ಬೇಕಾದ ಪೂರಕ ಬೆಳೆಗಳನ್ನು ಹೇಗೆ ಬೆಳೆಯಬೇಕೆಂಬುದರ ಪ್ರಾತ್ಯಕ್ಷಿಕೆ ನೀಡಲಾಯಿತು. ಬಳಿಕ ನೇಚರ್ […]