ಧಾರವಾಡ: ಉತ್ತರ ಕರ್ನಾಟಕ ಭಾಗದ ನಿರುದ್ಯೋಗ ಬವಣೆ ನೀಗಿಸುವ ಸಲುವಾಗಿ ಉದ್ಯಮಗಳನ್ನು ಆರಂಭಿಸಲು ಅಗತ್ಯ ಕ್ರಮ ಕೈಕೊಳ್ಳುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿರುವುದಾಗಿ ಸಚಿವ ಸಿ.ಎಸ್.ಶಿವಳ್ಳಿ ಹೇಳಿದರು.
ಅವರು ಶನಿವಾರ ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾ ಆಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ವಿವಿಧ ವೃತ್ತಿಪರ ಕೋರ್ಸ್ಗಳನ್ನು ಕಲಿತ ಯುವ ಸಮುದಾಯವಿದೆ. ಹೀಗಾಗಿ ಈ ಭಾಗದಲ್ಲಿ ಉದ್ಯಮಗಳನ್ನು ಆರಂಭಿಸುವ ಅವಶ್ಯಕತೆಯಿದೆ ಎಂಬುದನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಯುವಕರಿಗೆ ಉದ್ಯೋಗ ಒದಗಿಸುವ ಪ್ರಾಮಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.
ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಆಗದಂತೆ ನಿಗಾವಹಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಅಲ್ಲದೇ ಜಾನುವಾರುಗಳಿಗೆ ಮೇವು ಒದಗಿಸಲು ಮೇವು ಆರಂಭಿಸುವ ಉದ್ದೇಶದಿಂದ ಜಿಲ್ಲಾಡಳಿತ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ಮಹಾತ್ಮಾ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜನರಿಗೆ ಉದ್ಯೊÃಗ ಕಲ್ಪಿಸುವ ಮೂಲಕ ಗುಳೆ ಹೋಗದಂತೆ ತಡೆಯಲು ಅಗತ್ಯ ಕ್ರಮ ಕೈಕೊಳ್ಳುವುದಾಗಿ ಸಚಿವರು ಹೇಳಿದರು.