ಬೆಂಗಳೂರು : ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಶೀಘ್ರದಲ್ಲಿಯೇ ಉಚಿತ್ ಬಸ್ ಪಾಸ್ ವಿತರಣೆ ಮಾಡಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಎನ್. ಮಹೇಶ ತಿಳಿಸಿದ್ದಾರೆ.
ಅವರು ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಾರಿಗೆ ಇಲಾಖೆಯಿಂದ ಶೇ. 25ರಷ್ಟು ಹಾಗೂ ಶಿಕ್ಷಣ ಇಲಾಖೆಯಿಂದ ಶೇ. 25ರಷ್ಟು ಅನುದಾನ ಭರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಸಚಿವರು ಸಮಜಾಯಿಸಿ ನೀಡಿದ್ದಾರೆ.
ಸ್ವಲ್ಪ ತಡವಾಗಿದೆ. ಆದರೆ ಈ ಬಗ್ಗೆ ಸಿಎಂ ಕುಮಾರಸ್ವಾಮಿ ಜೊತೆಗೆ ಚರ್ಚಿಸಿ ಶೀಘ್ರದಲ್ಲಿಯೇ ಅಂತಿಮಗೊಳ್ಳಲಿದೆ. ತಡವಾದ್ರೂ ಉಚಿತ ಬಸ್ ಪಾಸ್ ಖಚಿತ ಎಂದು ಸಚಿವರು ಭರವಸೆ ನೀಡಿದ್ದಾರೆ.
ಈ ಬಗ್ಗೆ ರಾಜ್ಯ ಬಜೆಟ್ ನಲ್ಲಿ ಘೋಷಣೆ ಮಾಡದೆ ವಿಳಂಭ ಧೋರಣೆ ತೋರಿದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿ, ಭಾರೀ ಆಕ್ರೋಶ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಒಟ್ಟಿನಲ್ಲಿ ಇನ್ನಾದರೂ ವಿದ್ಯಾರ್ಥಿಗಳಿಗೆ ಉಚಿತ ಬಸ್ ದೊರೆಯುತ್ತಾ ಅಥವಾ ಕನ್ನಡಿಯೊಳಗಿನ ಗಂಟು ಆಗಲಿದೆಯಾ ಕಾದು ನೋಡಬೇಕಿದೆ.
