ರಾಜ್ಯ

ಅರ್ಧಕ್ಕೆ ವಿದೇಶ ಪ್ರವಾಸ ಮೊಟಕುಗೊಳಿಸಿದ ಸಿದ್ದರಾಮಯ್ಯ….!?

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರು ಆಗಿರುವ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ, ನಿನ್ನೆ ಸಂಜೆಯೇ ಬೆಂಗಳೂರಿನ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದ್ದಾರೆ.

ಇದಕ್ಕೆ ಪ್ರಮುಖ ಕಾರಣ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ವಿದೇಶ ಪ್ರವಾಸಕ್ಕೆ ತೆರಳಿದ ತಕ್ಷಣ ಪಕ್ಷದಲ್ಲಿ ಪ್ರಮುಖ ಬದಲಾವಣೆಗಳಾಗಿದ್ದು, ಅದರಲ್ಲೂ ತಮ್ಮ ಪರಮಾಪ್ತರಿಗೆ ಸಿಗಬೇಕಾಗಿದ್ದ ಸಭಾಪತಿ ಸ್ಥಾನ ಕೈತಪ್ಪಿರುವುದು ಪ್ರಮುಖ ಕಾರಣ ಎನ್ನಲಾಗಿದೆ.

ಈ ಬಗ್ಗೆ ಅನೇಕ ಕೈ ಶಾಸಕರು ದೂರವಾಣಿ ಕರೆ ಮಾಡಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲದೆ, ಇದರಿಂದ ಮತ್ತೇ ಉತ್ತರ ಕರ್ನಾಟಕ ಭಾಗಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ದೂರಿದ್ದಾರೆ.

ಅದರಲ್ಲೂ ವಿಶೇಷವಾಗಿ ಈ ಬಾರಿ ಅವರು ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಚಾಮುಂಡೇಶ್ವರಿಯಲ್ಲಿ ಸೋಲಿನ ಭೀತಿಯಿಂದ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಲು ಕಾರಣಿಕರ್ತರಾಗಿದ್ದ ಎಸ್.ಆರ್. ಪಾಟೀಲ ಅವರಿಗೆ ವಿಧಾನ ಪರಿಷತ್ ಸಭಾಪತಿ ಸ್ಥಾನ ನೀಡುವ ಮೂಲಕ ತಮ್ಮ ಋಣ ತೀರಿಸಲು ಮುಂದಾಗಿದ್ದರು.

ಆದರೆ ಅವರು ದಿಢೀರ್ ಆಗಿ ವಿದೇಶಕ್ಕೆ ತೆರಳುತ್ತಿದ್ದಂತೆ ಕರಾವಳಿ ಭಾಗದ ಶಾಸಕ ಪ್ರತಾಪಚಂದ್ರಶೆಟ್ಟಿ ಅವರಿಗೆ ಸಭಾಪತಿ ಪಟ್ಟ ಕಟ್ಟಿರುವುದು ಪಕ್ಷದಲ್ಲಿ ಎಲ್ಲವೂ ಸರಿಯಲ್ಲ ಎಂಬುದು ತೋರಿಸಿದೆ.

ಹೀಗಾಗಿ ಅವರು ಸಿಟ್ಟಿಗೆದ್ದು ತಮ್ಮ ವಿದೇಶ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ಡಿ. 15ರಂದು ಮರಳಬೇಕಾದವರು ಡಿ. 12ಕ್ಕೆ ಬಂದಿಳಿದ್ದಾರೆ. ಈ ಬಗ್ಗೆ ಶಾಸಕರೊಂದಿಗೆ ಸಮಾಲೋಚನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.

ಮಾಜಿ ಸಚಿವ ಎಸ್.ಆರ್. ಪಾಟೀಲ ಅವರಿಗೆ ವಿಧಾನ ಪರಿಷತ್ ಸಭಾಪತಿ ಸ್ಥಾನ ಕೈ ತಪ್ಪುತ್ತಿದ್ದಂತೆ ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ ಲಿಂಗಾಯತ ಶಾಸಕರು ಸಮ್ಮೀಶ್ರ ಸರಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ ಎನ್ನಲಾಗಿದೆ.

Please follow and like us:

Leave a Reply

Your email address will not be published. Required fields are marked *