ನವದೆಹಲಿ prajakiran.com : ದೇಶದ ಹಲವಡೆ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದುಪಡಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಕೂಡ ಪರೀಕ್ಷೆ ರದ್ದುಪಡಿಸಬೇಕು ಎಂದು ಕೋರಿ ಬೆಳಗಾವಿ ಮೂಲದ ರಾಜಶ್ರೀ ನಾಗರಾಜ್ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ್ದಾರೆ.
ಕೋವಿಡ್ 19 ಹಿನ್ನಲೆಯಲ್ಲಿ ಮಕ್ಕಳಿಗೆ ಸಾಕಷ್ಟು ಗ್ಯಾಪ್ ಆಗಿದೆ. ಪಾಲಕರು, ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದಾರೆ. ಪೂರ್ವ ಪರೀಕ್ಷೆ ಆಧಾರದ ಮೇಲೆ ಪಾಸ್ ಮಾಡಿ ಎಂದು ಕೋರಿದ್ದಾರೆ.
ರಾಜ್ಯದಲ್ಲಿ ಸಾಕಷ್ಟು ಪೋಷಕರು ಸಹ ಗೊಂದಲದಲ್ಲಿದ್ದಾರೆ. ಪರ ವಿರೋಧ ಚರ್ಚೆ ನಡೆಯುತ್ತಿದೆ.
ಈ ಸಂದರ್ಭದಲ್ಲಿ ಅವರು ಅರ್ಜಿ ಸಲ್ಲಿಸಿರುವುದು ತೀವ್ರ ಕುತೂಹಲ ಕೆರಳಿಸಿದೆ. ಅಲ್ಲದೆ, ಹೈಕೋರ್ಟ್ ಪರೀಕ್ಷೆ ರದ್ದುಪಡಿಸಲು ನಿರಾಕರಿಸಿದ ಹಿನ್ನಲೆಯಲ್ಲಿ ಸುಪ್ರೀಂ ಮೊರೆ ಹೋಗಿದ್ದಾರೆ.
ಈಗಾಗಲೇ ತಮಿಳುನಾಡು, ತೆಲಂಗಾಣ, ಪುದುಚೇರಿಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು ಮಾಡಿರುವುದರಿಂದ ಸುಪ್ರೀಂಕೋರ್ಟ್ ಇವರ ಅರ್ಜಿಯನ್ನು ಪುರಸ್ಕರಿಸುತ್ತಾ ಅಥವಾ ತಿರಸ್ಕರಿಸುತ್ತಾ ಮುಂದಿನ ನಡೆ ಏನು ಎಂಬುದು ಕಾದು ನೋಡಬೇಕಿದೆ.