ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕೋವಿಡ್ -೧೯ ಸೋಂಕು ಹರಡವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮೇ ೨೩ ಸಂಜೆ ೭ ಗಂಟೆಯಿಂದ ಮೇ ೨೫ ಬೆಳಿಗ್ಗೆ ೭ ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಉತ್ಪಾದನೆ,ಮದ್ಯ ಸಾಗಾಟ ಮತ್ತು ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.
ಈ ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ ೧೯೭೩ ರ ಕಲಂ ೧೪೪ ಹಾಗೂ ಕರ್ನಾಟಕ ಅಬಕಾರಿ ಕಾಯ್ದೆ ೧೯೬೫ ಕಲಂ ೨೧ ರನ್ವಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಎಚ್ಚರಿಸಿದ್ದಾರೆ.


