ಅಂತಾರಾಷ್ಟ್ರೀಯ

ಅಯೋಧ್ಯೆ ವಿಚಾರಣೆ ಜನೆವರಿಯಿಂದ : ಸುಪ್ರೀಂಕೋರ್ಟ್

ನವದೆಹಲಿ : ಅಯೋಧ್ಯೆ ರಾಮಜನ್ಮ ಭೂಮಿ ವಿವಾದವನ್ನು ತುರ್ತು ವಿಚಾರಣೆ ಕೈಗೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಜನೆವರಿಯಿಂದ ವಿಚಾರಣೆ ಕೈಗೊಳ್ಳಲಿದೆ ಎಂದು ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೆಯ್ ಅವರಿದ್ದ ಪೀಠವು ಸೋಮವಾರ ಅರ್ಜಿಯ ವಿಚಾರಣೆ ನಡೆಸಿ, ಅದಕ್ಕಾಗಿಯೇ ಹೊಸ ಪೀಠ ರಚಿಸಬೇಕು. ಆ ಪೀಠ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ. ಅಲ್ಲಿಯವರೆಗೆ ವಿಚಾರಣೆ ನಡೆಸಲು ಆಗಲ್ಲ ಎಂದು ಹೇಳಿದರು.

ಕೇಂದ್ರ ಸರಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಈ ಹಿಂದೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿ, ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನಲೆಯಲ್ಲಿ ಲೋಕಸಭಾ ಚುನಾವಣೆ ಬಳಿಕ ಅರ್ಜಿಯ ವಿಚಾರಣೆ ನಡೆಸುವಂತೆ ಕಾಂಗ್ರೆಸ್ ಕೋರಿತ್ತು. ಅದನ್ನು ಈ ಹಿಂದಿನ ಮುಖ್ಯ ನ್ಯಾಯಮೂರ್ತಿ ದೀಪಕ ಮಿಶ್ರಾ ನಿರಾಕರಿಸಿದ್ದರು. ಅಲ್ಲದೆ, ನವೆಂಬರ್ ನಿಂದ ಪ್ರತಿನಿತ್ಯ ವಿಚಾರಣೆ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದರು.

ಇದೀಗ ಜನೆವರಿಯಿಂದ ಅರ್ಜಿ ವಿಚಾರಣೆ ಆರಂಭಗೊಳ್ಳಲಿದೆ ಎಂದು ಸುಪ್ರೀಂಕೋರ್ಟ್ ನೂತನ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೆಯ್ ತಿಳಿಸಿರುವುದು ಭಾರೀ ಕುತೂಹಲ ಕೆರಳಿಸಿದೆ.

Please follow and like us:

Leave a Reply

Your email address will not be published. Required fields are marked *