ಬೆಳಗಾವಿ : ರಾಜ್ಯ ಸರಕಾರದ ಸದ್ಯದ ಸ್ಥಿತಿ ಮನೆಯೊಂದು ಮೂರು ಬಾಗಿಲು ಆದಂತಾಗಿದೆ ಎಂದು ಬೆಳಗಾವಿ ಸಂಸದ ಸುರೇಶಅಂಗಡಿ ಹೇಳಿದ್ದಾರೆ.
ಅವರು ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಒಂದು ಕಡೆಯಾದರೆ, ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಹಾಗೂ ಕಾಂಗ್ರೆಸ್ ಸರಕಾರದ ಶಾಸಕಾಂಗ ಸಭೆ ನಾಯಕ ಸಿದ್ದರಾಮಯ್ಯ ಇನ್ನೊಂದು ಕಡೆ ಎಂದು ವ್ಯಂಗ್ಯವಾಡಿದ್ದಾರೆ.
ಜನಸಾಮಾನ್ಯರ ಒಂದು ಸಣ್ಣ ಕೆಲಸನೂ ಆಗುತ್ತಿಲ್ಲ.ಸರಕಾರಕ್ಕೆ ಅಧಿಕಾರಿಗಳ ಮೇಲೆ ಹಿಡಿತವಿಲ್ಲ ತೆರಿಗೆ ತುಂಬಿದ ಹಣ ಎಲ್ಲಿ ಹೋಗುತ್ತಿದೆ ಎಂಬ ಪ್ರಶ್ನೆ ನಮ್ಮನ್ನು ಕಾಡುತ್ತಿದೆ ಎಂದು ಕಿಡಿಕಾರಿದರು.
ಇದೇ ವೇಳೆ ಸಚಿವ ಡಿ.ಕೆ. ಶಿವಕುಮಾರ ಅವರು ರಾಜ್ಯದ ಸಂಸದರಿಗೆ ನೀಡಿರುವ ದುಬಾರಿ ಐಪೋನ್ ಅನ್ನು ನಾಳೆ ವಾಪಾಸ್ಸುಮಾಡುತ್ತಿದ್ದೇನೆ. ನನ್ನಅನುಪಸ್ಥಿತಿಯಲ್ಲಿ ಅವರುಅದನ್ನು ನನಗೆ ತಲುಪಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಅಲ್ಲದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅಪ್ಪಿಕೊಂಡ ರಾಹುಲ್ ಗಾಂಧೀ ನಡೆ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ್ದಾರೆ.