ಮುಂಬೈ PRAJAKIRAN.COM : ನಾಟಕೀಯ ಬೆಳವಣಿಗೆಯಲ್ಲಿ ಬೆಳ್ಳಂ ಬೆಳಗ್ಗೆ ಸರಕಾರ ರಚಿಸಿ ರಾಷ್ಟ್ರದ ಗಮನ ಸೆಳೆದಿದ್ದ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿಗ್ ಶಾಕ್ ಆಗಿದೆ. ಬಿಜೆಪಿಗೆ ರಾತ್ರೋ ರಾತ್ರಿ ಬೆಂಬಲ ನೀಡಿದ್ದ ಎನ್ ಸಿ ಪಿ ಮುಖಂಡ ಅಜಿತ್ ಪವಾರ್ ತಮ್ಮ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರದ ಬಿಜೆಪಿ ಸರಕಾರದ ಮೊದಲ ವಿಕೆಟ್ ಪತನಗೊಂಡಂತಾಗಿದ್ದು, ಇನ್ನೂ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸರದಿ ಎನ್ನಲಾಗುತ್ತಿದೆ. ಹೀಗಾಗಿ ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ನಾಳೆ […]
Tag: # AJIT PAWAR
ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಅಜಿತ್ ಪವಾರ ಬೆಂಬಲ
ಮುಂಬೈ PRAJAKIRAN.COM : ಜೈಲಿಗೆ ಹೋಗುವುದನ್ನುತಪ್ಪಿಸಿಕೊಳ್ಳಲು ಎನ್ ಸಿ ಪಿ ನಾಯಕ ಅಜಿತ್ ಪವಾರ ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ಶಿವಸೇನೆ ಮುಖಂಡ ಸಂಜಯ ರಾವತ್ ವಾಗ್ದಾಳಿ ನಡೆಸಿದ್ದಾರೆ. ಅವರು ಶನಿವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಅಜಿತ್ ಪವಾರ್ ವಿರುದ್ದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶರದ ಪವಾರ್ ಗೆ ದ್ರೋಹ ಬಗೆದ ಅಜಿತ್ ಪವಾರ್ ನಡೆ ಬಗ್ಗೆ ನಮಗೆ ಮೊದಲೇ ಅನುಮಾನವಿತ್ತು. ನಿನ್ನೇ ರಾತ್ರಿ ಒಂಬತ್ತು ಗಂಟೆಯವರೆಗೆ ಶಿವಸೇನೆ-ಕಾಂಗ್ರೆಸ್ -ಎನ್ ಸಿಪಿ ಸರಕಾರ ರಚನೆಗೆ ಮುಂದಾಗಿದ್ದ ಎಂದು […]