ಅಂತಾರಾಷ್ಟ್ರೀಯ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಟಿ ಖುಷ್ಬೂ ಸುಂದರ್

ನವದೆಹಲಿ prajakiran.com : ದಕ್ಷಿಣ ಭಾರತದ ಪ್ರಖ್ಯಾತ ನಟಿ, ನಿರ್ಮಾಪಕಿ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಿ ಸೋಮವಾರ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಅವರು 2014 ರಲ್ಲಿ ಡಿಎಂಕೆ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಇದೀಗ ಬಿಜೆಪಿ ಸೇರುವ ಮೂಲಕ ತಮಿಳುನಾಡಿನ ರಾಜಕೀಯದಲ್ಲಿಮಿಂಚಿನ ಸಂಚಲನ ಸೃಷ್ಟಿಸಿದ್ದಾರೆ. ಈ ವೇಳೆ ಮಾತನಾಡಿದ ನಟಿ ಖುಷ್ಬೂ ಅವರು, ಕಾಂಗ್ರೆಸ್ ವಿರುದ್ದ ಹರಿಹಾಯ್ದಿದ್ದು, ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರಂತಹ ನಾಯಕತ್ವಅಗತ್ಯವಿದೆ. ಬರುವ ದಿನಗಳಲ್ಲಿ ತಮಿಳುನಾಡಿನಲ್ಲಿ ಬಿಜೆಪಿ […]

ರಾಜ್ಯ

ಧಾರವಾಡದ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ಧಾರವಾಡ prajakiran.com : ಧಾರವಾಡದ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿದೆ ಎಂದು ಚುನಾವಣಾಧಿಕಾರಿಗಳು ಘೋಷಣೆ ಮಾಡಿದ್ದಾರೆ. ಕ್ರಮಬದ್ದ ನಾಮಪತ್ರಗಳ ವಿವರ ಹೀಗಿದೆ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಆರ್. ಎಂ.ಕುಬೇರಪ್ಪ, ಜನತಾದಳ ( ಜಾತ್ಯಾತೀತ)ದ ಶಿವಶಂಕರ ಚನ್ನಪ್ಪ ಕಲ್ಲೂರ, ಭಾರತೀಯ ಜನತಾ ಪಕ್ಷದ ಸಿದ್ದಲಿಂಗಪ್ಪ ವಿ.ಸಂಕನೂರ, ಕರ್ನಾಟಕ ರಾಷ್ಟ್ರ ಸಮಿತಿಯ ಶಿವರಾಜ ಕೆಂಚಪ್ಪ ಕಾಂಬಳೆ, ಶಿವಸೇನಾ ಪಕ್ಷದ ಸೋಮಶೇಖರ ವಿರೂಪಾಕ್ಷ ಉಮರಾಣಿ, ಪಕ್ಷೇತರ ಅಭ್ಯರ್ಥಿಗಳಾದ ದಶರಥ ಚಂದ್ರಹಾಸ ರಂಗರೆಡ್ಡಿ, ಬಸನಗೌಡ […]

ರಾಜ್ಯ

ನಾನು ನನ್ನ ಕಾರ್ಯಕರ್ತರನ್ನು ಬಿಟ್ಟು ಎಲ್ಲೂ ಹೋಗಲ್ಲ ಎಂದ ವಿನಯ ಕುಲಕರ್ಣಿ

ಧಾರವಾಡ prajakiran.com : ಕಳೆದ ಕೆಲವು ದಿನಗಳಿಂದ ಬಿಜೆಪಿ ಸೇರುವ ಕುರಿತು ಊಹಾಪೋಹಗಳು ಎದ್ದಿವೆ. ನಾನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿಲ್ಲ ನಾನು ನನ್ನ ಕಾರ್ಯಕರ್ತರನ್ನು ಬಿಟ್ಟು ಎಲ್ಲೂ ಹೋಗಲ್ಲ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಸ್ಪಷ್ಟಪಡಿಸಿದರು. ಅವರು ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಆರು ಕುದುರಿ ಮಾರಾಟ ಮಾಡಿದ್ದೇನೆ. ಹೊಸ ಕುದುರೆ ನೋಡಲು ಹೋಗಿದ್ದೆ. ನಾನು ರಾಜಸ್ತಾನಕ್ಕೆ ಕುದುರೆ ತರಲು ಹೋಗಿದ್ದೆ. ಹೊರತು […]

ರಾಜ್ಯ

ಉಪಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಪ್ರೇರಿತ ದಾಳಿ ಎಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ prajakiran.com : ರಾಜ್ಯದಲ್ಲಿ ನಡೆಯಲಿರುವ ಶಿರಾ, ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನಲೆಯಲ್ಲಿ ನಾವು ಸಜ್ಜಾಗುತ್ತಿದ್ದ ವೇಳೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದು ರಾಜಕೀಯ ಪ್ರೇರಿತ ಎಂದುಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆರೋಪಿಸಿದ್ದಾರೆ. ಅವರು ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ದಾಳಿಯನ್ನು ಎದುರಿಸಲು ನಮ್ಮ ನಾಯಕರು ಸಮರ್ಥರಿದ್ದಾರೆ. ಎಲ್ಲವನ್ನು ಎದುರಿಸುವ ಶಕ್ತಿ ಅವರಿಗಿದೆ ಎಂದರು. ಇದರಿಂದಾಗಿ ವಿಚಲಿತರಾಗುವ ಪ್ರಶ್ನೆಯೇ ಇಲ್ಲ. ಕಾನೂನು ಹೋರಾಟ ನಡೆಸಲಾಗುವುದು ಎಂದು ಹೇಳಿದರು. ಯಾರನ್ನು ಯಾರು ಕಟ್ಟಿಹಾಕಲು ಆಗಲ್ಲ. […]

ರಾಜ್ಯ

ಕಾಂಗ್ರೆಸ್ ಸೇರಿದ ಡಿ.ಕೆ. ರವಿ ಪತ್ನಿ ಕುಸುಮಾ

ಬೆಂಗಳೂರು prajakiran.com : ಜೆಡಿಎಸ್ ಶಾಸಕ ಸತ್ಯನಾರಾಯಣ ನಿಧನದಿಂದ ತೆರವಾಗಿರುವ ಶಿರಾ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರಲು ಆರಂಭಿಸಿದೆ. ಟಿಕೇಟ್ ಆಕಾಂಕ್ಷಿಗಳು ಪಕ್ಷ ಸೇರ್ಪಡೆಗೊಳ್ಳುವ ಕೆಲಸಕ್ಕೆ ಚಾಲನೆ ನೀಡಿದ್ದಾರೆ. ಈಗಾಗಲೇ ಕಾಂಗ್ರೆಸ್ ಟಿಕೇಟ್ ಮೇಲೆ ಕಣ್ಣೀಟ್ಟಿರುವ ದಿವಂಗತ ಮಾಜಿ ಐ ಎ ಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಹಾಗೂ ಹನುಮಂತರಾಯಪ್ಪ ಪುತ್ರಿ ಆಗಿರುವ ಕುಸಮಾ ಭಾನುವಾರ ಬೆಂಗಳೂರಿನಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದರು. ಬೆಳಗ್ಗೆ 10-40ಕ್ಕೆ ಕಚೇರಿಗೆ ಬಂದಿದ್ದಅವರು ಶುಭಗಳಿಗೆಗಾಗಿ ಒಂದು […]

ರಾಜ್ಯ

ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ ಎಂದ ಹೆಚ್ಡಿಕೆ

ಬೆಂಗಳೂರು prajakiran.com : ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ,ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ ಬಿ ಎಸ್ ಪಿ ಶಾಸಕರನ್ನೇ ಸೆಳೆದ,ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು, ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ ಎಂದು ಕುಟುಕಿರುವಅವರು ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು […]

ಅಂತಾರಾಷ್ಟ್ರೀಯ

ಉತ್ತರ ಪ್ರದೇಶದ ಘಟನೆ ಖಂಡಿಸಿ ದೇಶದೆಲ್ಲಡೆ ರಸ್ತೆಗಿಳಿದ ಕಾಂಗ್ರೆಸ್

ನವದೆಹಲಿ /ಬೆಂಗಳೂರು prajakiran.com : ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಕೃತ್ಯವನ್ನು ಖಂಡಿಸಿ ದೇಶದೆಲ್ಲಡೆ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ರಾತ್ರಿ ಏಕಾಏಕಿ ದಿಢೀರ್ ಆಗಿ ರಸ್ತೆಗಿಳಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ದೇಶ ಹಾಗೂ ರಾಜ್ಯದಲ್ಲಿ ಸಂಜೆ ನಂತರ ಬೀದಿಗಿಳಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಹಲವಡೆ ಪೊಲೀಸರೊಂದಿಗೆ ವಾಗ್ವಾದ, ಮಾತಿನ ಚಕಮಕಿ, ಮುಖಂಡರನ್ನು ವಶಕ್ಕೆ ಪಡೆದುಕೊಂಡ ಘಟನೆಯೂ ನಡೆಯಿತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, […]

ಅಂತಾರಾಷ್ಟ್ರೀಯ

ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ ಮೇಲೆ ಪೊಲೀಸ್ ದಾಳಿ

ಧಾರವಾಡ prajakiran.com : ಉತ್ತರಪ್ರದೇಶದ ಹತ್ರಾಸ್ ನಲ್ಲಿ ಅತ್ಯಾಚಾರ, ಕೊಲೆಗೀಡಾದ ಯುವತಿಯ ಕುಟುಂಬದ ಭೇಟಿಗೆ ತೆರಳಿದ್ದ @RahulGandhi ರಾಹುಲ್ ಗಾಂಧಿ, @priyankagandhi ಪ್ರಿಯಾಂಕ ಗಾಂಧಿ ಅವರನ್ನು ದಾರಿ ಮಧ್ಯದಲ್ಲೇ ತಡೆದು ಉತ್ತರ ಪ್ರದೇಶದ ಪೊಲೀಸರು ಉದ್ಧಟತನ ಮೆರೆದಿದ್ದಾರೆ. ನೊಂದ ಕುಟುಂಬಕ್ಕೆ ಸಾಂತ್ವಾನ ಹೇಳಲೂ @myogiadityanath ಯೋಗಿ ಆದಿತ್ಯನಾಥ ಅವರ ನೇತೃತ್ವದ ಬಿಜೆಪಿ ಸರ್ಕಾರ ಅವಕಾಶ ನೀಡದಿರುವುದು ಅಮಾನವೀಯ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹೋರಾಟ ನ್ಯಾಯಕ್ಕಾಗಿ, ಬಿಜೆಪಿಯ ಗುಂಡು, ಲಾಠಿಗಳಿಂದ ನಿಲ್ಲುವುದಿಲ್ಲ. ಈ ಹೋರಾಟವು ದೇಶದ […]

ರಾಜ್ಯ

ಧಾರವಾಡ ಬಂದ್ : ಎತ್ತು, ಚಕ್ಕಡಿ ಪ್ರತಿಭಟನೆ

ಧಾರವಾಡ prajakiran.com : ಕೇಂದ್ರ ಹಾಗೂ ರಾಜ್ಯದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಸೇರಿದಂತೆ ವಿವಿಧ ಜನವಿರೋಧಿ ನೀತಿ ಖಂಡಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಧಾರವಾಡ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಹೋರಾಟದ ಕಾವು ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಜಿಲ್ಲಾಧಿಕಾರಿ ಕಚೇರಿ ತಲುಪಿ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಕೆಲವಡೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಣ್ಣ ಪುಟ್ಟಅಂಗಡಿಗಳು ಮಧ್ಯಾಹ್ನದ ನಂತರ ಎಂದಿನಂತೆ ಕಾರ್ಯನಿರ್ವಹಿಸಿದವು. […]

ರಾಜ್ಯ

ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು prajakiran.com : ಹೊಲದಲ್ಲಿ ಇರಬೇಕಾದ ರೈತ ಬೀದಿಗಿಳಿದು ತನ್ನ ಹಕ್ಕಿಗಾಗಿ ಧ್ವನಿ ಎತ್ತಿದ್ದು, ಆಳುವ ಸರ್ಕಾರಗಳ ಕಾರ್ಯವೈಖರಿ, ರೈತ ವಿರೋಧಿ ನಿಲುವನ್ನು ಎತ್ತಿ ತೋರಿಸುತ್ತಿದೆ ಎಂದು ಕಾಂಗ್ರೆಸ್ ಕಿಡಿ ಕಾರಿದೆ. ರೈತರನ್ನು ಈ ದೇಶದ ಕೇವಲ ಉತ್ಪಾದಕರೆಂದು ಮಾತ್ರ ಪರಿಗಣಿಸಿ, ಬೆಲೆ ನಿಗದಿ ಮಾಡುತ್ತಾರೇ ಹೊರತು ಆತನೂ ಈ ದೇಶದ ಬಳಕೆದಾರ ಅನ್ನಾದಾತ. ದೇಶದ ಬೆನ್ನೆಲುಬು, ರೈತರಿಗೆ ಸಂಕಷ್ಟ ಎದುರಾದರೆ ಅದು ದೇಶಕ್ಕೆ ಎದುರಾಗುವ ಸಂಕಷ್ಟ ರೈತ ರಾಜಕಾರಣದ ವಿಷಯ ವಸ್ತುವಲ್ಲ. ದೇಶದ ನಾಗರಿಕರ ಜೀವನಾಡಿ. […]