ಬೆಂಗಳೂರು PRAJAKIRAN.COM : ರಾಜ್ಯದ ಹದಿನೈದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕೇವಲ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ದಾಖಲಿಸಿ, ಇನ್ನೂಳಿದ ಹದಿಮೂರು ಕ್ಷೇತ್ರಗಳಲ್ಲಿ ಹೀನಾಯ ಸೋಲು ಅನುಭವಿಸಿದ ಹಿನ್ನಲೆಯಲ್ಲಿ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ನಾಯಕರು ಘೋಷಿಸಿದ್ದಾರೆ. ಅದರಲ್ಲೂ ವಿಶೇಷವಾಗಿ ವಿರೋಧ ಪಕ್ಷದ ನಾಯಕ ಸ್ಥಾನ ಉಳಿಸಿಕೊಂಡಿರುವ ಸಿದ್ದರಾಮಯ್ಯ ಕೇವಲ ಕಾಂಗ್ರೆಸ್ ಶಾಸಕಾಂಗ ಸಭೆಯ ನಾಯಕನ ಸ್ಥಾನದಿಂದ ಹಿಂದೆ ಸರಿಯುತ್ತಿರುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ […]
Tag: #dinesh
ಕೇಂದ್ರ ಸಚಿವ ಜೋಶಿ, ಶಾಸಕ ಬೆಲ್ಲದ ಹೆಸರಿನಲ್ಲಿ ಹಣ ಪೀಕಿದ ಬಿಜೆಪಿ ಕಾರ್ಯಕರ್ತ…..!?
ಧಾರವಾಡ PRAJAKIRAN.COM : ವಸತಿಯೋಜನೆಯಲ್ಲಿ ಮನೆ ಕೊಡಿಸುವುದಾಗಿ ಬಿಜೆಪಿ ಕಾರ್ಯಕರ್ತನೊಬ್ಬ ಧಾರವಾಡ ಸಂಸದರು ಆಗಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದ ಹೆಸರಿನಲ್ಲಿ ಮೋಸವೆಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಾಸಕರ ಹಾಗೂ ಸಂಸದರ ಹೆಸರು ಹೇಳಿ ಹಣ ಪೀಕಿದ ಬಿಜೆಪಿ ಕಾರ್ಯಕರ್ತ ದಿನೇಶನನ್ನು ಬಿಜೆಪಿ ಕಾರ್ಯಕರ್ತರೇ ಪತ್ತೆ ಹಚ್ಚಿ, ಪೊಲೀಸ್ ಠಾಣೆಗೆ ಕರೆ ತಂದಿದ್ದರು. ಆನಂತರ ಆತ ತಪ್ಪಿಪ್ಪುಕೊಂಡು ಹಣ ಮರಳಿಸುವುದಾಗಿ ಹೇಳಿದ್ದರಿಂದ ಬಿಟ್ಟು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. […]
ಬಿಜೆಪಿಯ ಅನೈತಿಕ ರಾಜಕಾರಣಕ್ಕೆ ಮತದಾರರು ಬೇಸತ್ತಿದ್ದಾರೆ
ಹುಬ್ಬಳ್ಳಿ PRAJAKIRAN.COM : ಬಿಜೆಪಿ ಹಾಗೂ ಪಕ್ಷಾಂತರಿಗಳ ವಿರುದ್ಧ ಜನರು ತಿರುಗಿ ಬಿದ್ದಿದ್ದಾರೆ. ಅನೈತಿಕ ರಾಜಕಾರಣಕ್ಕೆ ಮತದಾರರು ಬೇಸತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು. ಅವರು ಮಂಗಳವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರ ಮಾತಿನಲ್ಲಿ ಆರ್ಭಟವಿದೆ ಹೊರತು ಅಭಿವೃದ್ಧಿ ಕೆಲಸದಲ್ಲಿಲ್ಲ ಎಂದು ಕುಟುಕಿದರು. ಬಿಜೆಪಿಯವರ ಪ್ರತಿಯೊಂದು ಹೆಜ್ಜೆ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವಂತಿದೆ. ಅವರಿಗೆ ಸಂವಿಧಾನ, ಕಾನೂನು, ನೈತಿಕತೆಯಲ್ಲಿ ನಂಬಿಕೆಯಿಲ್ಲ. ಯಾವುದೇ ಮಾರ್ಗವಾಗಲಿ ಅಧಿಕಾರ ಹಿಡಿಯಬೇಕು ಎಂದು ಹೊರಟಿದ್ದಾರೆ ಎಂದು ಆರೋಪಿಸಿದರು. ರಾಜ್ಯದ ಹದಿನೈದು ಕ್ಷೇತ್ರಗಳಲ್ಲಿ […]