ರಾಜ್ಯ

ಬಿಜೆಪಿಯ ಅನೈತಿಕ ರಾಜಕಾರಣಕ್ಕೆ ಮತದಾರರು ಬೇಸತ್ತಿದ್ದಾರೆ

ಹುಬ್ಬಳ್ಳಿ PRAJAKIRAN.COM : ಬಿಜೆಪಿ ಹಾಗೂ ಪಕ್ಷಾಂತರಿಗಳ ವಿರುದ್ಧ ಜನರು ತಿರುಗಿ ಬಿದ್ದಿದ್ದಾರೆ. ಅನೈತಿಕ ರಾಜಕಾರಣಕ್ಕೆ ಮತದಾರರು ಬೇಸತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು. ಅವರು ಮಂಗಳವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರ ಮಾತಿನಲ್ಲಿ ಆರ್ಭಟವಿದೆ ಹೊರತು ಅಭಿವೃದ್ಧಿ ಕೆಲಸದಲ್ಲಿಲ್ಲ ಎಂದು ಕುಟುಕಿದರು. ಬಿಜೆಪಿಯವರ ಪ್ರತಿಯೊಂದು ಹೆಜ್ಜೆ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವಂತಿದೆ. ಅವರಿಗೆ ಸಂವಿಧಾನ, ಕಾನೂನು, ನೈತಿಕತೆಯಲ್ಲಿ ನಂಬಿಕೆಯಿಲ್ಲ. ಯಾವುದೇ ಮಾರ್ಗವಾಗಲಿ ಅಧಿಕಾರ ಹಿಡಿಯಬೇಕು ಎಂದು ಹೊರಟಿದ್ದಾರೆ ಎಂದು ಆರೋಪಿಸಿದರು. ರಾಜ್ಯದ ಹದಿನೈದು ಕ್ಷೇತ್ರಗಳಲ್ಲಿ […]

ರಾಜ್ಯ

ವಿಧಾನಸಭಾ ಅಧ್ಯಕ್ಷರ ತೀರ್ಪನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್

ರಾಯಚೂರು PRAJAKIRAN.COM : ಅನರ್ಹ ಶಾಸಕರ ವಿಚಾರದಲ್ಲಿ ವಿಧಾನಸಭಾ ಅಧ್ಯಕ್ಷರ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಆದರೆ ಸುಪ್ರೀಂಕೋರ್ಟ್ ಮರು ಸ್ಪರ್ಧೆಗೆ ಅವಕಾಶ ನೀಡಿದೆ. ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಬಲಗೊಳಿಸಲು ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದು ಕ್ರಮಕ್ಕೆ ಮುಂದಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಆಗ್ರಹಿಸಿದರು. ಅವರು ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹದಿನೈದು ಶಾಸಕರ ಖರೀದಿ ಮಾಡಿರುವ ಬಿಜೆಪಿ ನಿಜವಾದ ಮುಖವಾಡ ಬಯಲಾಗಿದೆ ಎಂದು ಆರೋಪಿಸಿದರು. ಬಿಜೆಪಿಗೆ ನೈತಿಕತೆಯಿದ್ದರೆ ಹದಿನೈದು ಶಾಸಕರಿಗೆ ಟಿಕೆಟ್ ನೀಡಬಾರದು […]