ನವದೆಹಲಿ prajakiran.com : ಪ್ರಧಾನಮಂತ್ರಿ ನರೇಂದ್ರ ಮೋದಿ @narendramodi ನೇತೃತ್ವದ ಬಿಜೆಪಿ ಸರಕಾರ ಮಂಡಿಸಿರುವ ಬಜೆಟ್ ನಲ್ಲಿ ಯಾವ ಯಾವ ಯೋಜನೆಗಳಿಗೆ ಎಷ್ಟು ಹಣ ನೀಡಲಾಗುತ್ತದೆ ಎಂಬ ವಿವರಣೆಗಳಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ. ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಹೆಚ್ಚಿನ ಹಣ ನೀಡಬೇಕಿತ್ತು, ಆ ಬಗ್ಗೆ ಸ್ಪಷ್ಟನೆ ಇಲ್ಲ ಎಂದು ದೂರಿದೆ. ಅಲ್ಲದೆ ದೇಶದ ಜಿಡಿಪಿ 5% ಕ್ಕೆ ಕುಸಿದಿದ್ದರು, 10% ಹೆಚ್ಚಳದ ಬಗ್ಗೆ ಮಾತನಾಡಿದ್ದಾರೆ. ಜನರ ದಾರಿ ತಪ್ಪಿಸುವ ಕೆಲಸ ವ್ಯವಸ್ಥಿತವಾಗಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ […]
Tag: #kpcc
ಗಾಂಧಿ ಹತ್ಯೆಯ ಕರಾಳ ದಿನದಂದೇ ಗೋಡ್ಸೆ ಸಂತತಿಗಳು ಹೆಚ್ಚುತ್ತಿವೆ ಎಂದ ಕಾಂಗ್ರೆಸ್
ಬೆಂಗಳೂರು Prajakiran.com : ನವದೆಹಲಿಯ ಜಾಮೀಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಿದ ರಾಮಭಕ್ತ ಗೋಪಾಲ್ ನಡೆಯನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. ಗಾಂಧಿಯ ಹತ್ಯೆಯ ಈ ಕರಾಳ ದಿನದಂದೇ ಗೋಡ್ಸೆಯ ಸಂತತಿಗಳು ಹೆಚ್ಚುತ್ತಿವೆ. ಅದರಲ್ಲೂ ಪೊಲೀಸರ ಸಮ್ಮುಖದಲ್ಲೇ ನಡೆಯುತ್ತಿರುವ ಇಂತಹ ಅಪಾಯಕಾರಿ ಸಂಗತಿ ಎಂದು ಕಿಡಿಕಾರಿದೆ. ಅಲ್ಲದೆ, ಇದು ಸಮಾಜದ ಮೇಲಿನ ಭರವಸೆಯನ್ನು ಹಾಳು ಮಾಡುತ್ತಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಜಾಣ ಕುರುಡು ಪ್ರದರ್ಶಿಸುತ್ತಿರುವ ಗೃಹ ಸಚಿವ ಅಮಿತ್ ಶಾ @AmitShah ಅವರು ಕೂಡಲೇ ರಾಜೀನಾಮೆ ನೀಡಲಿ […]
ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಸೋನಿಯಾ ಗಾಂಧಿ ನಿರ್ಧರಿಸುತ್ತಾರೆ ಎಂದ ಖರ್ಗೆ
ಬೆಂಗಳೂರು Prajakiran.com : ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಳಂಭವಾಗಲು ನಮ್ಮ ನಾಯಕರು ದೆಹಲಿ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಈ ಬಗ್ಗೆ ಶೀಘ್ರದಲ್ಲಿಯೇ ಹೈಕಮಾಂಡ್ ತಿರ್ಮಾನಿಸುತ್ತದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಅವರು ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ಕುರಿತು ಪ್ರತಿಕ್ರಿಯೆ ನೀಡಿದರು. ಎಐಸಿಸಿ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಅವರು ಈ ಬಗ್ಗೆ ನಿರ್ಧರಿಸುತ್ತಾರೆ. ಆದಷ್ಟು ಬೇಗ ಅವರು ಒಳ್ಳೆಯ ಆಯ್ಕೆ ಪ್ರಕಟಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷಕ್ಕಿಂತ ಯಾರು […]
ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕ್ಷಾಂಕಿಯೇ ಅಲ್ಲ ಎಂದ ಶಿವಕುಮಾರ್…!
ನವದೆಹಲಿ Prajakiran.com : ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕ್ಷಾಂಕಿಯೇ ಅಲ್ಲ. ಹೀಗಾಗಿ ಯಾರ ಸಹವಾಸಕ್ಕೂ ಹೋಗಿಲ್ಲ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಅವರು ಶುಕ್ರವಾರ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣದ ವಿಚಾರಣೆಗೆ ಬಂದಿದ್ದೇನೆ ಎಂದು ಹೇಳಿದರು. ನನ್ನ ಹೆಸರು ಯಾರು ಶಿಫಾರಸ್ಸು ಮಾಡಿಲ್ಲ. ನನಗೆ ಬೇಸರವೂ ಇಲ್ಲ. ನಾನು ಸ್ಪರ್ಧೆಯಲ್ಲಿಯೇ ಇಲ್ಲ. ನನ್ನ ಹೆಸರು ಇಲ್ಲವೆಂದ ಮೇಲೆ ಬೇಸರ ಪ್ರಶ್ನೇಯೇ ಬರಲ್ಲ ಎಂದು ಜಾರಿ ಕೊಂಡರು. ನಾನು ಸಾಮಾನ್ಯ ಕಾರ್ಯಕರ್ತ. ನನಗೆ ಕಾಂಗ್ರೆಸ್ […]
ಮೋದಿ, ಅಮಿತ್ ಶಾಅಹಂಕಾರ ಬಿಟ್ಟು ಚರ್ಚೆಗೆ ಕರೆಯಲಿ
ಮಂಗಳೂರು PRAJAKIRAN.COM : ಪೌರತ್ವ ಕಾಯ್ದೆ ಜಾರಿಗೆ ದೇಶದೆಲ್ಲಡೆ ತೀವ್ರ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಅಹಂಕಾರ ಬಿಟ್ಟು ಚರ್ಚೆಗೆ ಕರೆಯಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ್ ಆಗ್ರಹಿಸಿದರು. ಅವರು ಮಂಗಳವಾರ ಮಂಗಳೂರು ಗೋಲಿಬಾರ್ ನಲ್ಲಿ ಮೃತ ಪಟ್ಟ ಜಲೀಲ್ ಕಂದಕ್, ನೌಶೀದ್ , ಕುದ್ರೋಳಿಅವರ ಮನೆಗಳಿಗೆ ತೆರಳಿ ಕೆಪಿಸಿಸಿ ವತಿಯಿಂದ ತಲಾ ಎರಡು ಲಕ್ಷ ಪರಿಹಾರ ನೀಡಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. […]
ಮಹದಾಯಿ ವಿಚಾರದಲ್ಲಿ ಅನ್ಯಾಯ ಆದರೆ ಸಹಿಸೋದಿಲ್ಲ
ಬೆಂಗಳೂರು PRAJAKIRAN,COM : ಮಹದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ಆದರೆ ನಮ್ಮ ಕಾಂಗ್ರೆಸ್ ಪಕ್ಷ ಸಹಿಸೋದಿಲ್ಲ. ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಎಚ್ಚರಿಸಿದ್ದಾರೆ. ಅವರು ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಈ ವಿಷಯದಲ್ಲಿ ಬಿಜೆಪಿ ಸರಕಾರ ರಾಜಕಾರಣ ಮಾಡುವುದು ಬಿಟ್ಟು ರಾಜ್ಯದ ಹಿತ ಕಾಯಬೇಕು ಎಂದು ಮನವಿ ಮಾಡಿದರು. ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ @BSYBJP ಅವರೇ ಸರ್ವ ಪಕ್ಷಗಳ ನಿಯೋಗ ಕರೆದುಕೊಂಡು ಹೋಗಿ ಪ್ರಧಾನಿಯವರ ಭೇಟಿ ಮಾಡಿ ಕೇಂದ್ರದ ಮೇಲೆ […]
ಬೆಂಗಳೂರು ಪೊಲೀಸ್ ಆಯುಕ್ತರ ವಿರುದ್ದ ಕಾಂಗ್ರೆಸ್ ಗರಂ
ಬೆಂಗಳೂರು PRAJAKIRAN.COM : ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಪ್ರತಿಭಟನೆ ಮಾಡುವುದಾದರೆ ಉತ್ತರ ಭಾರತಕ್ಕೆ ಹೋಗಿ ಎನ್ನುವುದು ಸರಿಯಲ್ಲ ಎಂದು ಕಾಂಗ್ರೆಸ್ ಪಕ್ಷ ಕಿಡಿ ಕಾರಿದೆ. ಈ ಕುರಿತು ಶುಕ್ರವಾರ ಕೆಪಿಸಿಸಿ ಟ್ವೀಟ್ ಮಾಡಿದ್ದು, ಎಲ್ಲರಿಗೂ ಸುರಕ್ಷತೆ ಕೊಡುವುದು, ಹೋರಾಟಗಾರರಿಗೆ ಭರವಸೆಯ ಮಾತುಗಳನ್ನಾಡುವುದನ್ನು ಬಿಟ್ಟು ಈ ರೀತಿಯ ಹೇಳಿಕೆ ಕೊಟ್ಟಿರುವುದು ದುರದೃಷ್ಟಕರ. ಇದನ್ನು ಕರ್ನಾಟಕದ ಜನತೆ ನಿರೀಕ್ಷಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದೆ.ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವುದು ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂಬುದನ್ನು ಆಯುಕ್ತರು ಮರೆತಂತಿದೆ ಎಂದು […]
ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಿದ ಸಿದ್ದರಾಮಯ್ಯ, ದಿನೇಶ ಗುಂಡುರಾವ್
ಬೆಂಗಳೂರು PRAJAKIRAN.COM : ರಾಜ್ಯದ ಹದಿನೈದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕೇವಲ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ದಾಖಲಿಸಿ, ಇನ್ನೂಳಿದ ಹದಿಮೂರು ಕ್ಷೇತ್ರಗಳಲ್ಲಿ ಹೀನಾಯ ಸೋಲು ಅನುಭವಿಸಿದ ಹಿನ್ನಲೆಯಲ್ಲಿ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ನಾಯಕರು ಘೋಷಿಸಿದ್ದಾರೆ. ಅದರಲ್ಲೂ ವಿಶೇಷವಾಗಿ ವಿರೋಧ ಪಕ್ಷದ ನಾಯಕ ಸ್ಥಾನ ಉಳಿಸಿಕೊಂಡಿರುವ ಸಿದ್ದರಾಮಯ್ಯ ಕೇವಲ ಕಾಂಗ್ರೆಸ್ ಶಾಸಕಾಂಗ ಸಭೆಯ ನಾಯಕನ ಸ್ಥಾನದಿಂದ ಹಿಂದೆ ಸರಿಯುತ್ತಿರುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ […]
ಗಾಂಧಿನಗರದಲ್ಲಿ ಅಂಗಡಿ ತೆಗೆದಿರುವ ದಿನೇಶ ಗುಂಡುರಾವ್…!
ಹಿರೇಕೆರೂರ PRAJAKIRAN.COM : ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಮಾಜಿ ಸಿಎಂ ಸಿದ್ದರಾಮಯ್ಯ ಚೇಲಾ, ಚಮಚ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಹಿರೇಕೆರೂರ ಅನರ್ಹ ಶಾಸಕ ಬಿ.ಸಿ. ಪಾಟೀಲ ವಾಗ್ದಾಳಿ ನಡೆಸಿದ್ದಾರೆ. ಅವರು ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕೆಪಿಸಿಸಿ ಇಂತಹ ಅದಕ್ಷ, ದುರ್ಬಲ ಅಧ್ಯಕ್ಷನನ್ನು ಈ ಹಿಂದೆ ಎಂದಿಗೂ ಕಂಡಿರಲಿಲ್ಲ ಎಂದು ಅವರ ವಿರುದ್ದ ಕಿಡಿಕಾರಿದ್ದಾರೆ. ಮಾತನಾಡದೆ ಬಾಯಿಗೆ ಪ್ಲಾಸ್ಟರ್ ಹಾಕಕೊಂಡು ಇರಲು ಸಾಧ್ಯವಿಲ್ಲ.ನಮಗೂ ಮಾತನಾಡಲು ಬರುತ್ತದೆ ಎಂದು ಗುಡುಗಿದರು. ಅವರು ರಾಜ್ಯದಲ್ಲಿ ಕಾಂಗ್ರೆಸ್ […]
ಬಿಜೆಪಿಯ ಅನೈತಿಕ ರಾಜಕಾರಣಕ್ಕೆ ಮತದಾರರು ಬೇಸತ್ತಿದ್ದಾರೆ
ಹುಬ್ಬಳ್ಳಿ PRAJAKIRAN.COM : ಬಿಜೆಪಿ ಹಾಗೂ ಪಕ್ಷಾಂತರಿಗಳ ವಿರುದ್ಧ ಜನರು ತಿರುಗಿ ಬಿದ್ದಿದ್ದಾರೆ. ಅನೈತಿಕ ರಾಜಕಾರಣಕ್ಕೆ ಮತದಾರರು ಬೇಸತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು. ಅವರು ಮಂಗಳವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರ ಮಾತಿನಲ್ಲಿ ಆರ್ಭಟವಿದೆ ಹೊರತು ಅಭಿವೃದ್ಧಿ ಕೆಲಸದಲ್ಲಿಲ್ಲ ಎಂದು ಕುಟುಕಿದರು. ಬಿಜೆಪಿಯವರ ಪ್ರತಿಯೊಂದು ಹೆಜ್ಜೆ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವಂತಿದೆ. ಅವರಿಗೆ ಸಂವಿಧಾನ, ಕಾನೂನು, ನೈತಿಕತೆಯಲ್ಲಿ ನಂಬಿಕೆಯಿಲ್ಲ. ಯಾವುದೇ ಮಾರ್ಗವಾಗಲಿ ಅಧಿಕಾರ ಹಿಡಿಯಬೇಕು ಎಂದು ಹೊರಟಿದ್ದಾರೆ ಎಂದು ಆರೋಪಿಸಿದರು. ರಾಜ್ಯದ ಹದಿನೈದು ಕ್ಷೇತ್ರಗಳಲ್ಲಿ […]