ರಾಜ್ಯ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂದ ರಮೇಶ ಜಾರಕಿಹೊಳಿ !

ಬೆಂಗಳೂರು : ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ. ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರಕಾರ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಚಿವ ರಮೇಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಅವರು ಸೋಮವಾರ ನಡೆದ ಸಚಿವ ಸಂಪುಟ ಸಭೆಯಿಂದ ಹೊರಬಂದಿದ್ದಕ್ಕೆ ಹತ್ತು ಹಲವು ಊಹಾಪೋಹಗಳು ತೇಲಾಡುತ್ತಿದ್ದು, ಅದಕ್ಕೆ ಅಪಾರ್ಥ ಕಲ್ಪಿಸುವುದು ಬೇಡ. ನಾನು ಸಚಿವ ಸಂಪುಟ ಸಭೆಯಲ್ಲಿ ಕಬ್ಬಿನ ವಿಷಯ ಪ್ರಸ್ತಾಪವಾದ ಹಿನ್ನಲೆಯಲ್ಲಿ ಸಭೆಯಿಂದ ಹೊರಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ಸಿಎಂ ಕುಮಾರಸ್ವಾಮಿ ಅವರ ಗಮನಕ್ಕೆ ತಂದೆ ನಾನು ಸಭೆಯಿಂದ […]