ಧಾರವಾಡ PRAJAKIRAN.COM : ನೇರ ಹಾಗೂ ಪರೋಕ್ಷ ತೆರಿಗೆ ಶೇ. ೮೫ ರಷ್ಟು ವಂಚನೆ ಮೋಸ ಆಗುತ್ತಿದೆ. ಅದನ್ನು ತಡೆಯಲು ತೆರಿಗೆ ಸಲಹೆಗಾರರು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಅವರು ಶನಿವಾರ ನಗರದಲ್ಲಿ ಹಮ್ಮಿಕೊಂಡ ತೆರಿಗೆ ಸಲಹೆಗಾರರ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು.
ತೆರಿಗೆ ವಂಚನೆಯಿಂದ ದೇಶದ ಜಿಡಿಪಿ ಮೇಲೆ ಹೊಡೆತ ಬಿದ್ದಿದೆ. ನೋಟು ಅಮಾನ್ಯೀಕರಣದಿಂದ ಸಾಕಷ್ಟು ಪ್ರಮಾಣದಲ್ಲಿ ಕಡಿಮೆ ಆಗಿದೆ. ಆದರೂ ಸಾಧ್ಯವಾದಷ್ಟೂ ತೆರಿಗೆ ಸಲಹೆಗಾರರು ಪ್ರಾಮಾಣಿಕತೆ ಅಳವಡಿಸಿಕೊಳ್ಳಿ, ದೇಶಕ್ಕೆ ತೆರಿಗೆ ಆರ್ಥಿಕ ಸ್ವಾತಂತ್ರ್ಯ ಬೇಕಾಗಿದೆ ಎಂದರು.
ದೇಶಕ್ಕಾಗಿ ನಿಮ್ಮ ಬಲಿದಾನದ ಅಗತ್ಯವಿಲ್ಲ. ಆದರೆ ತೆರಿಗೆ ವ್ಯವಸ್ಥೆ ಬಲಪಡಿಸಬೇಕಾಗಿದೆ. ರೈತರಿಗೆ ಸೌಲಭ್ಯ, ರಸ್ತೆ, ಮೂಲಸೌಕರ್ಯ, ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ತೆರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸಬೇಕಾಗಿದೆ ಎಂದು ಕರೆ ನೀಡಿದರು.
ಹೆಚ್ಚು ಜನರು ತೆರಿಗೆ ಕಟ್ಟಿದರೆ ಹೆಚ್ಚು ಆದಾಯ ಘೋಷಣೆ ಮಾಡಿದರೆ ಅವರಿಗೆ ಪ್ರೋತ್ಸಾಹ ಸಿಗುತ್ತದೆ. ದೇಶಕ್ಕೆ ಹೆಚ್ಚಿನ ಆದಾಯ ಬರುವಂತೆ ನೋಡಿಕೊಳ್ಳಲು ಪ್ರಯತ್ನಿಸಬೇಕು ಎಂದರು.
ತೆರಿಗೆ ಸುಧಾರಣೆ ಇಂದಿನ ತುರ್ತು ಅಗತ್ಯವಾಗಿದೆ. ಜಿಎಸ್ ಟಿ ತಾಂತ್ರಿಕವಾಗಿ ಅವಲಂಬಿಸಿದೆ. ಎರಡು ತೆರಿಗೆ ಹಾಗೂ ಇತರೆ ತೆರಿಗೆ ಬದಲಿಗೆ ಒಂದೇ ತೆರಿಗೆ ನೀತಿ ಒಳಗೊಂಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಗ್ರಾಹಕರ ಮೇಲಿನ ಕಡಿಮೆ ಮಾಡಲು ಈ ಪದ್ದತಿಯನ್ನು ಜಾರಿಗೆ ತಂದಿದೆ. ಹಲವು ವಸ್ತುಗಳ ಮೇಲೆ ಬೀಳುತ್ತಿದ್ದ ತೆರಿಗೆ ನಿಯಂತ್ರಣ ಸಾಧಿಸಲು ಸಹಕಾರಿಯಾಗಿದೆ. ಜನರು ಇದರೊಂದಿಗೆ ಹೊಂದಾಣಿಕೆ ಆಗಬೇಕಿದೆ ಎಂದರು.
ಜನರಿಗೆ ಇದನ್ನು ತಿಳಿದುಕೊಳ್ಳಲು ಸ್ವಲ್ಪ ಸಮಯಾವಕಾಶ ಬೇಕಾಗುತ್ತದೆ. ಜನರಿಗೆ ತಿಳುವಳಿವಕೆ ನೀಡಲಾಗುತ್ತಿದೆ. ದೇಶದ ಸಣ್ಣ ಹಾಗೂ ಮಧ್ಯಮ ಉದ್ಯಮಿಗಳಿಗೆ ಹೊರೆಯಾಗದಂತೆ ನಿರೂಪಿಸಲಾಗಿದೆ ಎಂದರು.
ತೆರಿಗೆ ಸಲಹೆಗಾರರ ಮಾನ್ಯತೆ ಯನ್ನು ಕೇಂದ್ರ ಸರಕಾರ ಪರಿಗಣಿಸಲಿದೆ. ಶೀಘ್ರವಾಗಿ ಬೆಳೆಯುತ್ತಿರುವ ತೆರಿಗೆ ಪದ್ದತಿಯನ್ನು ಡಿಜಿಟಲ್ ಮಾಡಲಾಗಿದ್ದು,
ತೆರಿಗೆ ಪ್ರಮಾಣ ಕಡಿಮೆ ಆಗಬೇಕಾದರೆ ಹೆಚ್ಚಿನ ತೆರಿಗೆ ಸಂಗ್ರಹ ಮಾಡಲು ಸಹಕರಿಸಬೇಕು ಎಂದು ಕರೆ ನೀಡಿದರು.