ರಾಜ್ಯ

ಸಿಎಎ ವಿರುದ್ಧ ಶಾಲಾ ಮಕ್ಕಳಿಂದ ನಾಟಕ ಪ್ರದರ್ಶನ : ಶಾಲಾ ಶಿಕ್ಷಕಿ, ಮಗುವಿನ ತಾಯಿ ಬಂಧನ

ಬೀದರ prajakiran.com : ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಟಕ ಪ್ರದರ್ಶನ ಮಾಡಿದ್ದ ಶಾಲೆ ವಿರುದ್ದ ಪ್ರಕರಣ ದಾಖಲಾದ ಬೆನ್ನ ಹಿಂದೆಯೇ ಶಾಲಾ ಶಿಕ್ಷಕಿ ಹಾಗೂ ಮಗುವಿನ ತಾಯಿ ಬಂಧಿಸಲಾಗಿದೆ.

ಸಿಎಎ ವಿರುದ್ಧ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ ಮಾಡಿದ ಆರೋಪದಲ್ಲಿ ಇತ್ತೀಚೆಗೆ ಬೀದರ್ ನ ಶಾಹಿನ್ ಶಿಕ್ಷಣ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದೀಗ ಘಟನೆಗೆ ಸಂಬಂಧ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಮಕ್ಕಳನ್ನು ಬಳಸಿಕೊಂಡು ಪ್ರಧಾನಿ ನರೇಂದ್ರ ಮೋದಿಯವರನ್ನು ಅವಹೇಳನ ಮಾಡಲಾಗಿದೆ ಎಂದು ವ್ಯಕ್ತಿಯೊಬ್ಬರು ದೂರು ನೀಡಿದ್ದರು.

ತದ ನಂತರ ಶಾಲೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಾಯಿ ಮತ್ತು ಶಾಲೆ ಮುಖ್ಯ ಶಿಕ್ಷಕಿಯೊಬ್ಬರನ್ನು ಬಂಧಿಸಲಾಗಿದೆ.

ಬಂಧಿತರನ್ನು ಫಾರಿದಾ ಬೇಗಂ ಮತ್ತು ನವೀದಾ ಎಂದು ತಿಳಿದುಬಂದಿದ್ದು, ಅವರ ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಬೀದರ್ ಎಸ್ ಪಿ ಶ್ರೀಧರ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೀದರನ ಶಾಹಿನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್ ಖಾದಿರ್, ಕೆಲವು ಬೋಧಕ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ದುರದೃಷ್ಟಕರ.

ಬೋಧಕರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ, ಘಟನೆ ಬಗ್ಗೆ ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದೇವೆ ಎಂದು ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *