ಅಪರಾಧ

ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಾವು

ಮಡಿಕೇರಿ : ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದ ದಾರುಣ ಘಟನೆ ಕೊಡಗು ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲ ನಗರದ ವಿದ್ಯಾರ್ಥಿಗಳಾದ ಆಕಾಶ್, ಗಗನ್ ಹಾಗೂ ಶಶಾಂಕ್ ಮೃತ ದುರ್ದೈವಿಗಳು.

ಮಡಿಕೇರಿ ಜೂನಿಯರ್ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ರಂಜಾನ್ ನಿಮಿತ್ತ ರಜೆ ಕಳೆಯಲು ಕಾವೇರಿ ನದಿಯಲ್ಲಿ ಈಜಲು ತೆರಳಿದ್ದರು.

ಅಗ್ನಿ ಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯರ ಸಹಾಯದಿಂದ ಮೂವರು ಮೃತದೇಹ ಪತ್ತೆಯಾಗಿದ್ದು, ಅವರ ಪೋಷಕರಿಗೆ ಮರಣೋತ್ತರ ಪರೀಕ್ಷೆ ಬಳಿಕ ಹಸ್ತಾಂತರಿಸಲಾಗುವುದು.

ಈ ಕುರಿತು ಕುಶಾಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Please follow and like us:

Leave a Reply

Your email address will not be published. Required fields are marked *