ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪೋಲಿಸರು ಭರ್ಜರಿ ಕಾರ್ಯಚರಣೆ ನಡೆಸಿದ ಪರಿಣಾಮ ಇಬ್ಬರು ಕುಖ್ಯಾತ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿಯ ಸೆಟಲ್ಮೆಂಟ್ ನಿವಾಸಿಗಳಾದ ಭರತ ಗೋಕಾಕ ಹಾಗೂ ಯಲ್ಲಪ್ಪ ಅಂಬಿಗೇರ ಬಂಧಿತ ಆರೋಪಿಗಳಾಗಿದ್ದಾರೆ.
ಇವರಿಬ್ಬರು ದರೋಡಕೋರರು ಹುಬ್ಬಳ್ಳಿಯ ಪಿಬಿ ರಸ್ತೆಯಲ್ಲಿ ಲಾರಿ ಅಡ್ಡಗಟ್ಟಿ ದರೋಡೆ ಮಾಡಿದ್ದ ಚೋರರಾಗಿದ್ದರು.
ಚಾಲಕನ ಬಳಿ ಇದ್ದ ೧ ಲಕ್ಷ ೧೭ ಸಾವಿರ ರೂಪಾಯಿ ದೋಚಿ ಪರಾರಿಯಾಗಿದ್ದರು.
ಈ ಸಂಬಂಧ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.