ಧಾರವಾಡ prajakiran.com : ವಿದ್ಯಾನಗರಿ ಧಾರವಾಡದ ಜಿಲ್ಲೆಯಲ್ಲಿ ಶುಕ್ರವಾರ ಮತ್ತಿಬ್ಬರಿಗೆ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಸೋಂಕಿತರನ್ನು ಪಿ-1609ನೇ ಸೋಂಕಿತ 22 ವರ್ಷದ ಪುರುಷ ಹಾಗೂ ಪಿ-1610 ಸೋಂಕಿತ 23ವರ್ಷದ ಪುರುಷ ಇವರಿಬ್ಬರು ನವದೆಹಲಿಯಿಂದ ರೈಲಿನ ಮೂಲಕ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ.
ಈ ಇಬ್ಬರೂ ಯುವಕರನ್ನು ಧಾರವಾಡ ಜಿಲ್ಲೆಗೆ ಆಗಮಿಸಿದ ಕೂಡಲೇ ಗಂಟಲು ದ್ರವ ಪರೀಕ್ಷೆಗೊಳಪಡಿಸಿ, ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು.
ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 33 ಕ್ಕೆ ಏರಿಕೆಯಾಗಿದೆ. ಈಗಾಗಲೇ ಜಿಲ್ಲೆಯ 9 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನುಳಿದ 24 ಜನ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಹೊರ ರಾಜ್ಯದಿಂದ ಆಗಮಿಸುವವರಿಂದಲೇ ಧಾರವಾಡ ಜಿಲ್ಲೆಯ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇರುವುದು ಜನತೆಗೆ ಮತ್ತಷ್ಟು ಆತಂಕ ತರಿಸಿದೆ.
