ಬೆಂಗಳೂರು : ಕೇಂದ್ರ ಸಚಿವರ ಭೇಟಿಗಾಗಿ ಎರಡು ದಿನಗಳ ಪ್ರವಾಸಕ್ಕೆ ಸಿಎಂ ಕುಮಾರಸ್ವಾಮಿ ಅವರು ಬೆಂಗಳೂರಿನ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಅವರು ಮಧ್ಯಾಹ್ನ 3.30ಕ್ಕೆ ದೆಹಲಿಗೆ ತಲುಪಲಿದ್ದಾರೆ. ಆನಂತರ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಇದಾದ ಬಳಿಕ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ, ರಕ್ಷಣಾ ಸಚಿವೆ, ನಿರ್ಮಲಾ ಸೀತಾರಾಮನ್ , ರಾಧಾ ಮೋಹನ್ ಸಿಂಗ್, ಪಿಯೋಲ್ ಗೋಯೆಲ್ ಸೇರಿ ಹಲವರನ್ನು ಭೇಟಿ ಮಾಡಿ ರಾಜ್ಯದ ವಿಷಯಗಳ ಕುರಿತು ಚರ್ಚಿಸಲಿದ್ದಾರೆ.
ಇದಾದ ಬಳಿಕ ಜುಲೈ 18ರಂದು ನವದೆಹಲಿಯಲ್ಲಿ ರಾಜ್ಯದ ಸಂಸದರ ಸಭೆಯನ್ನು ಕೂಡ ನಡೆಸಲಿದ್ದಾರೆ. ಜುಲೈ 19ರಂದು ನವದೆಹಲಿಯಿಂದ ಮರಳಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ.