ನವದೆಹಲಿ : ಸಂಸದ ಡಿ. ಕೆ ಸುರೇಶ್ ವಿರುದ್ದ ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಕಿಡಿಕಾರಿದ್ದಾರೆ.
ಅವರು ನವದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯ ಕಾರಣಿ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಂಸದ ಸುರೇಶ ಸುಖಾ ಸುಮ್ಮನೇ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಅಣ್ಣ ತಮ್ಮಂದಿರ ಭ್ರಷ್ಟಾಚಾರ ತಡೆ ಹಿಡಿಯಿರಿ ಎಂಬ ಪತ್ರ ಬರೆದಿಲ್ಲ. ನಮಗೂ ಆದಾಯ ತೆರಿಗೆ ಇಲಾಖೆಗೂ ಯಾವುದೇ ಸಂಬಂಧ ಇಲ್ಲ. ಈ ದಾಳಿ ರಾಜಕೀಯ ಪ್ರೇರಿತ ಎಂದು ಆರೋಪಿಸಿರುವುದು ಬೇಸರದ ಸಂಗತಿ ಎಂದು ಕಿಡಿಕಾರಿದರು.
ಸಚಿವ ಡಿ.ಕೆ. ಸುರೇಶ್ ಅವರು ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. 2017ರ ಪತ್ರ ಫೇಕ್ ಲೇಟರ್ ಬಹಿರಂಗ ಮಾಡಿದ್ದು ಸರಿಯಲ್ಲ. ನಾನು ಶಿವಕುಮಾರ ಅವರು ತುಂಬಾ ಆತ್ಮೀಯತೆಯಿಂದ ಚೆನ್ನಾಗಿದ್ದೇವೆ. ನಮ್ಮಿಬ್ಬರ ಮಧ್ಯೆ ಹುಳಿ ಹಿಂಡುವ ವ್ಯವಸ್ಥಿತ ಷಡ್ಯಂತ್ರ ಮಾಡುತ್ತಿದ್ದಾರೆ. ಇದರ ಹಿಂದೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕೈವಾಡವಿರಬಹುದು ಎಂದು ಸಂಶಯ ವ್ಯಕ್ತಪಡಿಸಿದರು.
ಸಂಸದ ಡಿ.ಕೆ. ಸುರೇಶ ಬೇಕಿದ್ದರೆ ತಮ್ಮ ಅಣ್ಣನಿಗೆ ಹೋಗಿ ಕೇಳಲಿ ಎಂದು ಬಿಎಸ್ ವೈ ತಿರುಗೇಟು ನೀಡಿದ್ದಾರೆ. ಸುರೇಶ ಯಾಕೆ ಈ ರೀತಿ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂಬುದು ತಮಗೆ ತಿಳಿಯುತ್ತಿಲ್ಲ ಎಂದು ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮವು ಉತ್ತರ ಕರ್ನಾಟಕದ ಗದಗ ಹಾವೇರಿ ಹಾಗೂ ಧಾರವಾಡ ಜಿಲ್ಲೆಗೂ ಆಗಮಿಸಿದೆ. ಬಿಜೆಪಿ ಯುವ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಮಹೇಂದ್ರ ಕೌತಾಳ, ಧಾರವಾಡ ಜಿಲ್ಲಾಧ್ಯಕ್ಷ ಶರಣು ಅಂಗಡಿ ಹಾಗೂ ಅವರ ತಂಡ ಈ ಚಿತಾಭಸ್ಮವನ್ನು ಈ ಮೂರು ಜಿಲ್ಲೆಗಳಲ್ಲಿ ತೆಗೆದುಕೊಂಡು ಸಂಚರಿಸುತ್ತಿದೆ. ಹುಬ್ಬಳ್ಳಿಯಲ್ಲಿ ವಾಜಪೇಯಿ ಅವರ ಚಿತಾಭಸ್ಮಕ್ಕೆ ಅಭೂತಪೂರ್ವ ಸ್ವಾಗತ ನೀಡಲಾಯಿತು. ಸಂಸದ ಪ್ರಹ್ಲಾದ ಜೋಶಿ, ರಾಜ್ಯ ಉಪಾಧ್ಯಕ್ಷ ಎಂ.ನಾಗರಾಜ, ಮಹಾನಗರ ಜಿಲ್ಲಾಧ್ಯಕ್ಷ ನಾಗೇಶ ಕಲಬುರಗಿ […]
ದಾವಣಗೆರೆ : ಶನಿವಾರ ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ಸಂಭವಿಸಿದೆ. ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಘಟನೆ ಜರುಗಿದ್ದು, ಬೆಂಗಳೂರಿ ನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕೆಎ 42 M 9491 ನಂಬರಿನ ಕಾರಿನಲ್ಲಿ ನಾಲ್ವರು ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ. ಮೃತರನ್ನು 27 ವರ್ಷದ ವಿನಯ್, 35 ವರ್ಷದ ಅಜಯ್, ಮತ್ತೋರ್ವ 30 ವರ್ಷದ ವಿನಯ್ ಹಾಗೂ 28 ವರ್ಷದ […]
ಬೆಂಗಳೂರು : ಐಟಿ ದಾಳಿ ಹಿನ್ನಲೆಯಲ್ಲಿ ಸಚಿವ ಡಿಕೆ ಶಿವಕುಮಾರ ಸೇರಿ ಇತರರಿಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಗುರುವಾರ ನ್ಯಾಯಾಲಯಕ್ಕೆ ಹಾಜರಾದ ಸಚಿವ ಡಿ.ಕೆ. ಶಿವಕುಮಾರ ಹಾಗೂ ಇತರರಿಗೆ ಐವತ್ತು ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್ ಪಡೆದು ಮಧ್ಯಂತರ ಜಾಮೀನು ನೀಡುವ ಮೂಲಕ ಸದ್ಯಕ್ಕೆ ರಿಲೀಫ್ ನೀಡಿದೆ ಸರಕಾರಕ್ಕೆ ತೆರಿಗೆ ವಂಚನೆ ಹಾಗೂ ಕಾಂಗ್ರೆಸ್ ಹೈ ಕಮಾಂಡ್ ಗೆ ಹವಾಲಾ ಹಣ ತಲುಪಿಸಿದ ಗಂಭೀರ ಆರೋಪವನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ […]