ರಾಜ್ಯ

ಸಂಪುಟ ವಿಸ್ತರಣೆ ಒಂದು ಪ್ರಹಸನವಾಗಿದೆ ಎಂದ ಶಾಸಕ ಯತ್ನಾಳ

ಹುಬ್ಬಳ್ಳಿ prajakiran.com : ರಾಜ್ಯ ಸಚಿವ ಸಂಪುಟ ಶುಕ್ರವಾರದೊಳಗೆ ಸಂಪುಟ ವಿಸ್ತರಣೆ ಮಾಡಲಿ. ಸಂಪುಟ ವಿಸ್ತರಣೆ ವಿಚಾರ ಒಂದು ರೀತಿ ಪ್ರಹಸನವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಅವರು ಮಂಗಳವಾರ ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿ, ಬೆಳ್ಳಿಗ್ಗೆಯಿಂದ ರಾತ್ರಿಯವರೆಗೂ ಬರೀ ಮಾಧ್ಯಮಗಳಲ್ಲಿ ರಾಜ್ಯದ ಬಿಜೆಪಿ ಸರಕಾರದ ಸಚಿವ ಸಂಪುಟ ವಿಸ್ತರಣೆಯದ್ದೇ ಚರ್ಚೆಯಾಗುತ್ತಿದೆ ಎಂದರು.

ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅವುಗಳ ಬಗ್ಗೆ ಗಮನಹರಿಸಬೇಕಾಗಿದೆ. ಅದಕ್ಕಾಗಿ ಸಂಪುಟ ವಿಸ್ತರಣೆ ಅತ್ಯಗತ್ಯವಾಗಿದೆ ಎಂದರು.

ಸಂಪುಟ ವಿಸ್ತರಣೆಗೆ ಹೈಕಮಾಂಡ್ ಹಾಗೂ ಸಿಎಂ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಸಂಪುಟ ವಿಸ್ತರಣೆ ವೇಳೆ ಕೆಲವರು ತ್ಯಾಗ ಮಾಡಲಿ. ಕೇವಲ ವಿಧಾನಸೌಧದಲ್ಲಿ ಕುಳಿತುಕೊಳ್ಳುವವರಿಗೆ ಸಚಿವ ಸ್ಥಾನ ನೀಡಬಾರದು ಎಂದರು.

ಅದರಲ್ಲೂ ವಿಶೇಷವಾಗಿ ಗೂಟದ ಕಾರು ಬೇಕು ಎನ್ನುವವರಿಗೆ ಯಾವುದೇ ಕಾರಣಕ್ಕೂ ಸಚಿವ ಸ್ಥಾನ ನೀಡಬಾರದು. ಕೆಲಸ ಮಾಡುವವರಿಗೆ ಮಾತ್ರ ಸಚಿವ ಸ್ಥಾನ ನೀಡಲಿ ಎಂದರು.

ಬಿಜೆಪಿ ಸರಕಾರದ ರಚನೆಗೆ ಕಾರಣರಾದವರಿಗೆ ಸಚಿವ ಸ್ಥಾನ ಹಂಚಿಕೆ ಮಾಡಲಿ. ಅವರು ಪಕ್ಷಕ್ಕೆ ಬಂದಿದ್ದಕ್ಕೆ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದರು.

ನಾನೇನೂ ಸಚಿವ ಸ್ಥಾನದ ಆಕ್ಷಾಂಕಿಯಲ್ಲ. ನಾನು ತ್ಯಾಗ ಮಾಡಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ಪಷ್ಟ ಪಡಿಸಿದರು.

Please follow and like us:

Leave a Reply

Your email address will not be published. Required fields are marked *